ಶುಕ್ರವಾರ, ನವೆಂಬರ್ 15, 2019
22 °C

ಉಪ ಚುನಾವಣೆ | ಬಿಜೆಪಿ ಹೆಚ್ಚು ಸ್ಥಾನ ಗೆಲ್ಲುವ ವಿಶ್ವಾಸ: ಪ್ರಹ್ಲಾದ ಜೋಶಿ

Published:
Updated:

ಹುಬ್ಬಳ್ಳಿ: ‘ಹದಿನೈದು ಕ್ಷೇತ್ರಗಳ ಉಪ ಚುನಾವಣೆಗೆ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ಬಿಜೆಪಿ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ’ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.

ಹುಬ್ಬಳ್ಳಿಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಅನರ್ಹರ ಚುನಾವಣೆ ಸ್ಪರ್ಧೆಗೆ ಸಂಬಂಧಿಸಿದಂತೆ, ಸುಪ್ರೀಂಕೋರ್ಟ್‌ ತೀರ್ಪು ನಮ್ಮ ಪರವಾಗಿ ಬರಲಿದೆ ಎಂಬ ವಿಶ್ವಾಸವಿದೆ’ ಎಂದರು.

ಪ್ರವಾಹ ಪರಿಹಾರ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ದೇಶದ ಹತ್ತು ರಾಜ್ಯಗಳಲ್ಲಿ ಪ್ರವಾಹ ಬಂದಿದೆ. ಕರ್ನಾಟಕ ಸೇರಿದಂತೆ ಎಲ್ಲಾ ರಾಜ್ಯಗಳಿಗೂ ಒಂದೇ ಬಾರಿ ಪರಿಹಾರ ನೀಡಲು ಕೇಂದ್ರ ಸರ್ಕಾರ ಮುಂದಾಗಿದ್ದು, ಆ ಕುರಿತು ಪ್ರಕ್ರಿಯೆಗಳು ನಡೆಯುತ್ತಿವೆ’ ಎಂದು ಹೇಳಿದರು.

ಪ್ರತಿಕ್ರಿಯಿಸಿ (+)