ಭಾನುವಾರ, ಜನವರಿ 23, 2022
27 °C

ಪಂಜಾಬ್ ಸರ್ಕಾರ ವಜಾಕ್ಕೆ ಆಗ್ರಹಿಸಿ ಬಿಜೆಪಿ ಯುವ ಮೋರ್ಚಾ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

PV Photo

ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭದ್ರತೆ ನೀಡುವಲ್ಲಿ ಪಂಜಾಬ್ ಸರ್ಕಾರ ವಿಫಲವಾಗಿದೆ ಎಂದು‌ ಆರೋಪಿಸಿ, ಹುಬ್ಬಳ್ಳಿ ಧಾರವಾಡ ಬಿಜೆಪಿ ಯುವ ಮೋರ್ಚಾ ಘಟಕದ ಕಾರ್ಯಕರ್ತರು ಕಾಂಗ್ರೆಸ್ ವಿರುದ್ಧ ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ನಗರದ ಕಾರವಾರ ರಸ್ತೆಯ ಇ.ಎಸ್.ಐ ಆಸ್ಪತ್ರೆಯಿಂದ ಕಾಂಗ್ರೆಸ್ ಕಚೇರಿಯವರೆಗೆ ಪಂಜಾಬ್ ಮುಖ್ಯಮಂತ್ರಿ ಚರಣ್‌ಜಿತ್ ಸಿಂಗ್ ಚನ್ನಿ ಅವರ ಅಣಕು ಶವಯಾತ್ರೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಪ್ರಧಾನಿಗೆ ರಕ್ಷಣೆ ನೀಡಲು ಸಾಧ್ಯವಾಗದ ಅಲ್ಲಿನ ಕಾಂಗ್ರೆಸ್ ಸರ್ಕಾರವನ್ನು ವಜಾ ಮಾಡಿ, ರಾಷ್ಟ್ರಪತಿ ಆಡಳಿತ ಹೇರಬೇಕು ಎಂದು ಆಗ್ರಹಿಸಿದರು.

ಹುಧಾ ಬಿಜೆಪಿ ಮಹಾನಗರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದತ್ತಮೂರ್ತಿ ಕುಲಕರ್ಣಿ ಮಾತನಾಡಿ, ಅಭಿವೃದ್ಧಿ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಪ್ರಧಾನಿಗೆ ಉದ್ದೇಶ ಪೂರ್ವಕವಾಗಿ ಪಂಜಾಬ್ ಸರ್ಕಾರ ರೈತರ ಪ್ರತಿಭಟನೆ ಮೂಲಕ‌ ತಡೆ ಒಡ್ಡಿದಿದೆ. ಕೂಡಲೇ ಅಲ್ಲಿಯ ಸರ್ಕಾರ ವಜಾಗೊಳಿಸಬೇಕು ಎಂದು ಆಗ್ರಹಿಸಿದರು.

ನಂತರ ಕಾಂಗ್ರೆಸ್ ಕಚೇರಿ ಮುತ್ತಿಗೆ ಹಾಕಲು ಮುಂದಾದ ಕಾರ್ಯಕರ್ತರನ್ನು ಪೊಲೀಸರು ತಡೆದರು. ಈ ವೇಳೆ ಪೊಲೀಸ್ ಮತ್ತು ಕಾರ್ಯಕರ್ತರ ನಡುವೆ ಮಾತಿನ ಚಕಮಕಿ‌ ನಡೆಯಿತು. ಬಳಿಕ ಕಾರ್ಯಕರ್ತರು ಕಾಂಗ್ರೆಸ್ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಬಸವರಾಜ ಅಮ್ಮಿನಬಾವಿ, ಅನೂಫ್ ಬಿಜವಾಡ, ಪ್ರಕಾಶ್ ಶೃಂಗೇರಿ, ಅವಿನಾಶ ಹರಿವಾಣ, ಶಿವಯ್ಯ ಹಿರೇಮಠ, ಪ್ರೀತಂ ಅರಕೇರಿ, ಚಂದ್ರಶೇಖರ ಗೋಕಾಕ, ರಜತಸಿಂಗ್ ಹಜಾರೆ, ಪ್ರಭು ನವಲಗುಂದಮಠ, ಶೀಲಾ ಕಾಟಕರ, ಶಾಂತವ್ವ ಹಿರೇಮಠ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು