ಸೋಮವಾರ, ಅಕ್ಟೋಬರ್ 26, 2020
23 °C
ಸಂಕನೂರ ಪರ ರಾಜ್ಯ ಯುವ ಮೋರ್ಚಾ ಅಧ್ಯಕ್ಷ ಮತಯಾಚನೆ

ಮತದಾರರಿಗೆ ಬಿಜೆಪಿ ಮೊದಲ ಆದ್ಯತೆ: ಡಾ. ಸಂದೀಪ ಕುಮಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹುಬ್ಬಳ್ಳಿ: ಕೇಂದ್ರ ಮತ್ತು ರಾಜ್ಯದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರಗಳು ಜನಪರವಾಗಿ ಕೆಲಸ ಮಾಡಿವೆ. ಆದ್ದರಿಂದ ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಪದವೀಧರರು ನಮ್ಮ ಪಕ್ಷಕ್ಕೆ ಮೊದಲ ಆದ್ಯತೆ ನೀಡುತ್ತಾರೆ ಎಂದು ರಾಜ್ಯ ಬಿಜೆಪಿ ಯುವ ಮೋರ್ಚಾ ಘಟಕದ ಅಧ್ಯಕ್ಷ ಡಾ. ಸಂದೀಪ ಕುಮಾರ ಹೇಳಿದರು.

ನಗರದಲ್ಲಿ ಮಂಗಳವಾರ ಕಿಮ್ಸ್‌ ನಿರ್ದೇಶಕ ಮತ್ತು ವೈದ್ಯರನ್ನು ಭೇಟಿಯಾಗಿ ಮತಯಾಚಿಸಿದ ಬಳಿಕ ಮಾಧ್ಯಮದವರ ಜೊತೆ ಅವರು ಮಾತನಾಡಿ ‘ನಮ್ಮ ಪಕ್ಷ ಬೂತ್‌ ಮಟ್ಟದಿಂದಲೇ ಗಟ್ಟಿಯಾಗಿದೆ. ಹೀಗಾಗಿ ತಯಾರಿಯೂ ಜೋರಿದೆ. ಯುವ ಮೋರ್ಚಾ ಅಧ್ಯಕ್ಷನಾದ ಬಳಿಕ ಉತ್ತರ ಕರ್ನಾಟಕ ಭಾಗಕ್ಕೆ ಮೊದಲ ಬಾರಿಗೆ ಬಂದಿದ್ದೇನೆ. ನಮ್ಮ ಅಭ್ಯರ್ಥಿ ಎಸ್.ವಿ. ಸಂಕನೂರ ಅವರನ್ನು ಗೆಲ್ಲಿಸುವ ಜವಾಬ್ದಾರಿ ಎಲ್ಲರ ಮೇಲಿದೆ’ ಎಂದರು.

‘ಹಿಂದಿನ ಅವಧಿಯಲ್ಲಿ ಸಂಕನೂರ ಉತ್ತರ ಕರ್ನಾಟಕದ ಪ್ರತಿನಿಧಿಯಾಗಿ ಪದವೀಧರರ ಸಮಸ್ಯೆಗಳಿಗೆ ಸ್ಪಂದಿಸಿದ್ದಾರೆ.  ಎಲ್ಲಾ ಕ್ಷೇತ್ರಗಳಲ್ಲಿ ಉತ್ತಮ ಕೆಲಸ ಮಾಡಿದ್ದಾರೆ. ಎದುರಾಳಿ ಪಕ್ಷಗಳ ಶಕ್ತಿಗಿಂತ ನಮ್ಮ ಅಭ್ಯರ್ಥಿ ಮತ್ತು ಪಕ್ಷದ ಸಾಮರ್ಥ್ಯದ ಬಗ್ಗೆ ಅಪಾರ ವಿಶ್ವಾಸವಿದೆ’ ಎಂದರು.

ಸಂಕನೂರ ಅವರ ಸಾಧನೆಗಳ ಮಾಹಿತಿ ಒಳಗೊಂಡ ಕರಪತ್ರವನ್ನು ಮತದಾರರಿಗೆ ವಿತರಿಸಿದರು. ಬಿ.ವಿ.ಬಿ. ಕಾಲೇಜಿನಲ್ಲಿ ಮತಯಾಚಿಸಿ ‘ಹಿಂದಿನ ಅವಧಿಯಲ್ಲಿ ಮಾಡಿದ ಸಾಧನೆಗಳನ್ನು ಒಳಗೊಂಡ ಪುಸ್ತಕವನ್ನು ಅವರು ಬಿಡುಗಡೆ ಮಾಡಿದ್ದಾರೆ. ಅವರನ್ನು ಗೆಲ್ಲಿಸುವ ಮೂಲಕ ವಿಧಾನ ಪರಿಷತ್‌ನಲ್ಲಿ ಬಿಜೆಪಿ ಸರ್ಕಾರವನ್ನು ಬಲಿಷ್ಠಗೊಳಿಸಬೇಕು’ ಎಂದು ಹೇಳಿದರು.

ಬಿಜೆಪಿ ವಿಭಾಗ ಪ್ರಭಾರಿ ಲಿಂಗರಾಜ ಪಾಟೀಲ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ತಿಪ್ಪಣ್ಣ ಮಜ್ಜಗಿ, ಮಹಾನಗರ ಜಿಲ್ಲಾ ಯುವ ಮೋರ್ಚಾ ಘಟಕದ ಅಧ್ಯಕ್ಷ ಅಧ್ಯಕ್ಷ ಕಿರಣ ಉಪ್ಪಾರ, ಜಿಲ್ಲಾ ವಕ್ತಾರ ರವಿ ನಾಯಕ, ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಬಾಳಿಕಾಯಿ, ಅಜಿತ್ ಹೆಗ್ಡೆ, ಉಪಾಧ್ಯಕ್ಷ ಪ್ರಕಾಶ ಶೃಂಗೇರಿ, ಕಾರ್ಯದರ್ಶಿ ಮಂಜುನಾಥ, ಅವಿನಾಶ ಹರಿವಾಣ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು