ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕಾಂಗ್ರೆಸ್‌ನಿಂದ ಬ್ಲ್ಯಾಕ್‌ಮೇಲ್‌: ಬಿಜೆಪಿ ಆರೋಪ

Published 12 ಏಪ್ರಿಲ್ 2024, 16:00 IST
Last Updated 12 ಏಪ್ರಿಲ್ 2024, 16:00 IST
ಅಕ್ಷರ ಗಾತ್ರ

ಹುಬ್ಬಳ್ಳಿ: ‘ಲೋಕಸಭಾ ಚುನಾವಣೆಯಲ್ಲಿ ಮತ ಹಾಕದಿದ್ದರೆ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಾಗಿ ಕಾಂಗ್ರೆಸ್‌ ಬ್ಲ್ಯಾಕ್‌ಮೇಲ್‌ ಮಾಡುತ್ತಿದೆ’ ಎಂದು  ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಮಂಜುಳಾ ಆರೋಪಿಸಿದರು.

ಇಲ್ಲಿನ ಅರವಿಂದ ನಗರದಲ್ಲಿರುವ ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಈಗಾಗಲೇ ಕಾಂಗ್ರೆಸ್‌ ಸರ್ಕಾರ ಹಲವು ಜನಪರ ಯೋಜನೆಗಳನ್ನು ನಿಲ್ಲಿಸಿದೆ. ರೈತರಿಗೆ ನೀಡಲಾಗುತ್ತಿದ್ದ ₹ 4 ಸಾವಿರ ಪ್ರೋತ್ಸಾಹ ಧನ, ವಿದ್ಯಾರ್ಥಿಗಳಿಗೆ ಸೈಕಲ್‌ ವಿತರಣೆ ಯೋಜನೆಯನ್ನು ನಿಲ್ಲಿಸಿದ್ದಾರೆ’ ಎಂದು ಆರೋಪಿಸಿದರು.

‘ಸರ್ಕಾರಿ ಸಾರಿಗೆ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಲು  ‘ಶಕ್ತಿ’ ಯೋಜನೆ ಜಾರಿಗೊಳಿಸಿದ್ದಾರೆ. ಆದರೆ, ಇದಕ್ಕೆ ಬೇಕಾದ ಪೂರ್ವ ತಯಾರಿ ಮಾಡಿಕೊಂಡಿರಲಿಲ್ಲ. ಬಸ್‌ಗಳ ಕೊರತೆಯಿಂದಾಗಿ ಮಹಿಳೆಯರು ಆಸನಕ್ಕಾಗಿ ಬಡಿದಾಡಿಕೊಳ್ಳುವಂತೆ ಮಾಡಿದ್ದಾರೆ ಎಂದು ವ್ಯಂಗ್ಯವಾಡಿದರು.

‘ಪ್ರಧಾನಿ ನರೇಂದ್ರ ಮೋದಿ ನಾರಿಶಕ್ತಿಯನ್ನು ಸದೃಢಗೊಳಿಸಲು ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಸ್ವಯಂ ಉದ್ಯೋಗ ಕೈಗೊಳ್ಳಲು ಆರ್ಥಿಕ ಸಹಾಯ ನೀಡಿದ್ದಾರೆ. ದ್ರೌಪದಿ ಮುರ್ಮು ಅವರನ್ನು ರಾಷ್ಟ್ರಪತಿ ಮಾಡಿದ್ದಾರೆ’ ಎಂದು ಹೇಳಿದರು.

ಪಕ್ಷದ ನಾಯಕಿಯರಾದ ರಾಜೇಶ್ವರಿ ಸಸಾಲಟ್ಟಿ, ಚೈತ್ರಾ ಶಿರೂರು, ಭಾರತಿ ಅಳವಂಡಿ, ಮೇನಕಾ, ದತ್ತಮೂರ್ತಿ ಕುಲಕರ್ಣಿ, ಸೀಮಾ ಲದವಾ, ರೂಪಾ ಶೆಟ್ಟಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT