ಮಂಗಳವಾರ, 27 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂಧ ಮಹಿಳೆಯರ ರಾಷ್ಟ್ರೀಯ ಟಿ–20 ಟೂರ್ನಿ: ಕರ್ನಾಟಕ– ಒಡಿಶಾ ಅಂತಿಮ ಹಣಾಹಣಿ

Published 11 ಜನವರಿ 2024, 16:49 IST
Last Updated 11 ಜನವರಿ 2024, 16:49 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಆತಿಥೇಯ ಕರ್ನಾಟಕ ತಂಡವು, ಅಂಧ ಮಹಿಳೆಯರ ರಾಷ್ಟ್ರೀಯ ಟಿ–20 ಕ್ರಿಕೆಟ್‌ ಟೂರ್ನಿಯ ಸೆಮಿಫೈನಲ್‌ ಪಂದ್ಯದಲ್ಲಿ ದೆಹಲಿ ತಂಡವನ್ನು 7 ವಿಕೆಟ್‌ಗಳಿಂದ ಸೋಲಿಸಿ, ಫೈನಲ್‌ಗೆ ಲಗ್ಗೆ ಇಟ್ಟಿತು.

ಮತ್ತೊಂದು ಸೆಮಿಫೈನಲ್‌ ಪಂದ್ಯದಲ್ಲಿ ಒಡಿಶಾ ತಂಡವು, ಆಂಧ್ರಪ್ರದೇಶ ತಂಡವನ್ನು 19 ರನ್‌ಗಳಿಂದ ಮಣಿಸಿ, ಫೈನಲ್‌ ಪ್ರವೇಶಿಸಿತು. ಕರ್ನಾಟಕ ಹಾಗೂ ಒಡಿಶಾ ತಂಡಗಳ ನಡುವೆ ಶುಕ್ರವಾರ ಬೆಳಿಗ್ಗೆ 9 ಗಂಟೆಗೆ ನಗರದ ಕರ್ನಾಟಕ ಜಿಮ್ಖಾನ ಮೈದಾನದಲ್ಲಿ ಅಂತಿಮ ಹಣಾಹಣಿ ನಡೆಯಲಿದೆ.

ಗುರುವಾರ ನಡೆದ ಸೆಮಿಫೈನಲ್‌ ಪಂದ್ಯದಲ್ಲಿ ಮೊದಲು ಬೌಲಿಂಗ್‌ ಆಯ್ಕೆ ಮಾಡಿಕೊಂಡ ಕರ್ನಾಟಕ ತಂಡವು, ಚಾಣಾಕ್ಷ ಆಟದಿಂದ ದೆಹಲಿ ತಂಡದ ಬ್ಯಾಟರ್‌ಗಳನ್ನು ಕಟ್ಟಿಹಾಕಿತು. 20 ಓವರ್‌ಗಳಲ್ಲಿ 5 ವಿಕೆಟ್‌ ನಷ್ಟಕ್ಕೆ 132 ರನ್‌ ಗಳಿಸಲಷ್ಟೇ ಸಾಧ್ಯವಾಯಿತು.

ನಿಗದಿತ ಗುರಿ ಬೆನ್ನಟ್ಟಿದ ಕರ್ನಾಟಕ ತಂಡ, 3 ವಿಕೆಟ್‌ ಕಳೆದುಕೊಂಡು ಆರಂಭಿಕ ಆಘಾತ ಅನುಭವಿಸಿತು. ದೀಪಿಕಾ (63*), ಲಕ್ಷ್ಮೀ (29*) ಅವರ ಅದ್ಭುತ ಆಟದ ನೆರವಿನಿಂದ ಗೆಲುವಿನ ದಡ ಸೇರಿತು. 6 ಓವರ್‌ ಬಾಕಿ ಇರುವಂತೆಯೇ 133 ರನ್‌ ಗಳಿಸಿ, ಜಯದ ನಗೆ ಬೀರಿತು. ಉತ್ತಮ ಪ್ರದರ್ಶನ ತೋರಿದ ದೀಪಿಕಾ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

ಮತ್ತೊಂದು ಸೆಮಿಫೈನಲ್‌ ಪಂದ್ಯದಲ್ಲಿ ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡ ಒಡಿಶಾ ತಂಡ 3 ವಿಕೆಟ್‌ ನಷ್ಟಕ್ಕೆ 183 ರನ್‌ ಗಳಿಸಿತು. ನಿಗದಿತ ಗುರಿ ತಲುಪಲಾಗದೆ ಆಂಧ್ರಪ್ರದೇಶ ತಂಡವು 6 ವಿಕೆಟ್‌ ನಷ್ಟಕ್ಕೆ 164 ರನ್ ಗಳಿಸಿ, ಸೋಲೊಪ್ಪಿಕೊಂಡಿತು.

55 ಎಸೆತಗಳಲ್ಲಿ 82 ರನ್‌ ಗಳಿಸಿದ ಆಂಧ್ರಪ್ರದೇಶ ತಂಡದ ಜಿಲಿ ಬಿರುವಾ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.

ಕ್ರಿಕೆಟ್ ಅಸೋಸಿಯೇಷನ್ ಫಾರ್ ದಿ ಬ್ಲೈಂಡ್ ಇನ್ ಇಂಡಿಯಾ (ಸಿಎಬಿಐ), ಕರ್ನಾಟಕ ಕ್ರಿಕೆಟ್ ಅಸೋಸಿಯೇಷನ್ ಫಾರ್ ದಿ ಬ್ಲೈಂಡ್ (ಸಿಎಬಿಐ), ಸಮರ್ಥನಂ ಟ್ರಸ್ಟ್ ಫಾರ್ ದಿ ಡಿಸಬಲ್ಡ್ ಸಹಯೋಗದಲ್ಲಿ ಇಂಡಸ್‌ಇಂಡ್ ಬ್ಯಾಂಕ್ ಈ ಟೂರ್ನಿ ಆಯೋಜಿಸಿದೆ.

ಹುಬ್ಬಳ್ಳಿಯಲ್ಲಿ ಗುರುವಾರ ನಡೆದ ಅಂಧ ಮಹಿಳೆಯರ ರಾಷ್ಟ್ರೀಯ ಟಿ–20 ಕ್ರಿಕೆಟ್‌ ಟೂರ್ನಿಯ ಸೆಮಿಫೈನಲ್‌ ಪಂದ್ಯದಲ್ಲಿ ಗೆಲುವು ಸಾಧಿಸಿ ಫೈನಲ್‌ಗೆ ಪ್ರವೇಶಿಸಿದ ಒಡಿಶಾ ತಂಡ ಆಟಗಾರ್ತಿಯರು
ಹುಬ್ಬಳ್ಳಿಯಲ್ಲಿ ಗುರುವಾರ ನಡೆದ ಅಂಧ ಮಹಿಳೆಯರ ರಾಷ್ಟ್ರೀಯ ಟಿ–20 ಕ್ರಿಕೆಟ್‌ ಟೂರ್ನಿಯ ಸೆಮಿಫೈನಲ್‌ ಪಂದ್ಯದಲ್ಲಿ ಗೆಲುವು ಸಾಧಿಸಿ ಫೈನಲ್‌ಗೆ ಪ್ರವೇಶಿಸಿದ ಒಡಿಶಾ ತಂಡ ಆಟಗಾರ್ತಿಯರು
ಹುಬ್ಬಳ್ಳಿಯ ಜಿಮ್ಖಾನ ಮೈದಾನದಲ್ಲಿ ಫೈನಲ್ ಪಂದ್ಯ ಬೆಳಿಗ್ಗೆ 9 ಗಂಟೆಗೆ ಪಂದ್ಯ ಆರಂಭ ಇಂಡಸ್‌ಇಂಡ್ ಬ್ಯಾಂಕ್‌ನಿಂದ ಟೂರ್ನಿ ಆಯೋಜನೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT