ಶನಿವಾರ, ಮಾರ್ಚ್ 25, 2023
30 °C

ರಕ್ತದಾನ ಪ್ರಾಣದಾನಕ್ಕೆ‌ ಸಮ: ಮಾರುತಿ ಬಾಗಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹುಬ್ಬಳ್ಳಿ: ವೈದ್ಯಕೀಯ ಸಂಕಷ್ಟದ ಸಂದರ್ಭದಲ್ಲಿ ರಕ್ತ ಅಗತ್ಯವಾಗಿರುತ್ತದೆ. ರಕ್ತದಾನ ಮಾಡುವುದು ಪ್ರಾಣದಾನ ಮಾಡುವುದಕ್ಕೆ ಸಮ ಎಂದು ಜಿಲ್ಲಾ ನ್ಯಾಯಾಧೀಶರಾದ ಮಾರುತಿ ಬಾಗಡೆ ಹೇಳಿದರು.

ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಕಿಮ್ಸ್, ಪೊಲೀಸ್ ಹಾಗೂ ವಾರ್ತಾ ಇಲಾಖೆ ಸಹಯೋಗದಲ್ಲಿ ನೂತನ ನ್ಯಾಯಾಲಯ ಸಂಕೀರ್ಣ‌ದಲ್ಲಿ ಮಂಗಳವಾರ 75ನೇ ಸ್ವಾತಂತ್ರ್ಯ ಮಹೋತ್ಸವ ಹಾಗೂ ರಾಷ್ಟ್ರೀಯ ಕಾನೂನು ಸೇವೆಗಳ ದಿನಾಚರಣೆ ಅಂಗವಾಗಿ ಆಯೋಜಿಸಲಾಗಿದ್ದ ರಕ್ತದಾನ ಹಾಗೂ ಆರೋಗ್ಯ ತಪಾಸಣೆ ಶಿಬಿರದಲ್ಲಿ ಅವರು ಮಾತನಾಡಿದರು.

‘ಯುವಕರು ರಕ್ತದಾನ ಮಾಡಲು ಮುಂದೆ ಬರಬೇಕು. ಅಪಘಾತ, ಹೆರಿಗೆ, ಶಸ್ತ್ರಚಿಕಿತ್ಸೆ ಸಂದರ್ಭದಲ್ಲಿ‌ ರಕ್ತ, ಕೆಂಪು ರಕ್ತ ಕಣಗಳು, ಪ್ಲಾಸ್ಮಾ ಅವಶ್ಯಕವಾಗಿ ಬೇಕಾಗುತ್ತವೆ’ ಎಂದರು.

ತಾಲ್ಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷ ರವೀಂದ್ರ.ಡಿ. ಅರಿ, ನ್ಯಾಯಾಧೀಶರಾದ ದೇವೆಂದ್ರಪ್ಪ ಎನ್. ಬಿರಾದಾರ, ಕೆ.ಎನ್.ಗಂಗಾಧರ, ವಕೀಲರ ಸಂಘದ ಅಧ್ಯಕ್ಷ ಸಿ.ಆರ್.ಪಾಟೀಲ, ಕಿಮ್ಸ್ ರಕ್ತನಿಧಿ ಕೇಂದ್ರದ ಮುಖ್ಯಸ್ಥ ಡಾ.ಅನಿಲ ಕುಮಾರ್ ಪಿ.ಎಸ್ ಇದ್ದರು.

ನ್ಯಾಯಾಧೀಶ ರಾಜಶೇಖರ ಎಂ‌ ತಿಲಗಂಜಿ, ಪೊಲೀಸ್ ಇನ್ಸ್‌ಪೆಕ್ಟರ್‌ ಜಗದೀಶ ಹಂಚಿನಾಳ, ವಕೀಲ ಐ‌.ಕೆ. ಬೆಳಗಲಿ ಸೇರಿದಂತೆ ಹಲವರು ರಕ್ತದಾನ ಮಾಡಿದರು. ಆಯ್ಯಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಕಾರ್ಡ್‌ಗಳನ್ನು ಪಡೆಯಲು ಅವಕಾಶ ಕಲ್ಪಿಸಲಾಗಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು