ಬಿಆರ್‌ಟಿಎಸ್ ಬಸ್ ನಿಲ್ದಾಣದಲ್ಲಿ ಫೇರ್‌ಗೇಟ್ ಹಾಳಾಗಿರುವುದು
ಚಿಗರಿ ಬಸ್‌ವೊಂದರಲ್ಲಿ ಸೀಟುಗಳು ಕೊಳೆಗಟ್ಟಿರುವುದು
ದಿವ್ಯಪ್ರಭು
ಪ್ರಿಯಾಂಗಾ ಎಂ.
ಸಾವಿತ್ರಿ ಕಡಿ
ರವೀಶ್ ಸಿ.ಆರ್.
ಸಂತೋಷ ಲಾಡ್
ಬಿಆರ್‌ಟಿಎಸ್ ಬಸ್ ಕಾರಿಡಾರ್ ಅಸಮರ್ಪಕ ನಿರ್ವಹಣೆ ಬಗ್ಗೆ ದೂರುಗಳು ಕೇಳಿಬಂದಿವೆ. ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಈ ಬಗ್ಗೆ ಸಭೆ ನಡೆಸಿ ಚರ್ಚಿಸಲಾಗುವುದು. ಸಮಸ್ಯೆ ಶೀಘ್ರ ಬಗೆಹರಿಸಲಾಗುವುದು
ದಿವ್ಯಪ್ರಭು ಜಿಲ್ಲಾಧಿಕಾರಿ
ಬಿಆರ್‌ಟಿಎಸ್ ಬಸ್‌ಗಳನ್ನು ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆ ನಿರ್ವಹಣೆ ಮಾಡುತ್ತಿದೆ. ಹಾಳಾದ ಬಸ್‌ಗಳ ದುರಸ್ತಿ ಸೇರಿದಂತೆ ವಿವಿಧ ವಿಷಯಗಳ ಕುರಿತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದೆ
ಪ್ರಿಯಾಂಗಾ ಎಂ. ವ್ಯವಸ್ಥಾಪಕ ನಿರ್ದೇಶಕಿ ಎನ್‌ಡಬ್ಲುಕೆಆರ್‌ಟಿಸಿ
ಬಿಆರ್‌ಟಿಎಸ್ ಕಾರಿಡಾರ್‌ನಲ್ಲಿನ ಸಮಸ್ಯೆಗಳನ್ನು ಗುರುತಿಸಲಾಗಿದೆ. ಸದ್ಯ ಟೆಂಡರ್ ಪ್ರಕ್ರಿಯೆ ನಡೆದಿದ್ದು 15 ದಿನದೊಳಗೆ ಎಲ್ಲವನ್ನೂ ಸರಿಪಡಿಸಲಾಗುವುದು
ಸಾವಿತ್ರಿ ಬಿ.ಕಡಿ ಹು– ಧಾ ಬಿಆರ್‌ಟಿಎಸ್ ವ್ಯವಸ್ಥಾಪಕ ನಿರ್ದೇಶಕಿ
ಬಿಆರ್‌ಟಿಎಸ್ ಕಾರಿಡಾರ್‌ನಲ್ಲಿ ಓಡಾಡುವ ಖಾಸಗಿ ವಾಹನಗಳಿಗೆ ದಂಡ ವಿಧಿಸಲಾಗುತ್ತದೆ. ಪದೇಪದೇ ನಿಯಮ ಉಲ್ಲಂಘಿಸುವ ವಾಹನಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಲಾಗುತ್ತಿದೆ