ಭಾನುವಾರ, ಮೇ 22, 2022
28 °C
ಸಾರ್ವಜನಿಕರ ಪೂರ್ವಭಾವಿ ಸಭೆ

ಹು–ಧಾ ಮಹಾನಗರ ಪಾಲಿಕೆ: ತಿಂಗಳಾಂತ್ಯದಲ್ಲಿ ಬಜೆಟ್‌ ಸಿದ್ಧ:

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ 2020-21ನೇ ಸಾಲಿನ ಬಜೆಟ್‌ ಕುರಿತು ಸೋಮವಾರ ಪಾಲಿಕೆ ಆಯುಕ್ತರ ಸಭಾಭವನದಲ್ಲಿ ಸಾರ್ವಜನಿಕರ, ಸಂಘ–ಸಂಸ್ಥೆಗಳ ಪೂರ್ವಭಾವಿ ಸಭೆ ನಡೆಯಿತು.

ಪಾಲಿಕೆ ಆಯುಕ್ತ ಸುರೇಶ ಇಟ್ನಾಳ್‌ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಪಾಲ್ಗೊಂಡು‌ ಸಲಹೆ ನೀಡಿದರು.

ನಾಗರಿಕ ಹೋರಾಟ ಸಮಿತಿ ಅಧ್ಯಕ್ಷ ಪ್ರೇಮನಾಥ‌ ಚಿಕ್ಕತುಂಬಳ, ‘ಪಾರ್ಕಿಂಗ್ ಸ್ಥಳಗಳನ್ನು ಹೆಚ್ಚಿಸಬೇಕು. ಪಾಲಿಕೆ ಒಡೆತನದ ಜಾಗದಲ್ಲಿ ಜಾಹೀರಾತು ಫಲಕಗಳನ್ನು‌ ಅಳವಡಿಸಬೇಕು’ ಎಂದು ಹೇಳಿದರು.

ಸಂಗ್ರಾಮ‌ ಸೇನೆ ಅಧ್ಯಕ್ಷ ಸಂಜೀವ ದುಮ್ಮಕನಾಳ, ‘ವಲಯ 6ರ ವ್ಯಾಪ್ತಿಯ ರಸ್ತೆಯಲ್ಲಿ ಹಗಲು– ರಾತ್ರಿ ದೊಡ್ಡ ವಾಹನಗಳನ್ನು ನಿಲ್ಲಿಸುತ್ತಾರೆ. ಅಂತಹ ವಾಹನಗಳಿಗೆ ಪಾರ್ಕಿಂಗ್‌ ಶುಲ್ಕ ವಿಧಿಸಬೇಕು. ರಾಜಕಾಲುವೆ ಮೇಲೆ ಕಟ್ಟಡ ಕಟ್ಟಿದವರಿಂದ ಹೆಚ್ಚುವರಿ ತೆರಿಗೆ ವಸೂಲಿ ಮಾಡಬೇಕು’ ಎಂದು ಸಲಹೆ ನೀಡಿದರು.

ಸಮತಾ ಸೇನೆಯ ರಾಜ್ಯ ಘಟಕದ ಅಧ್ಯಕ್ಷ ಗುರುನಾಥ ಉಳ್ಳಿಕಾಶಿ, ‘ಪಾಲಿಕೆ ವಾಣಿಜ್ಯ ಮಳಿಗೆಗಳಿಂದ ಪಾಲಿಕೆಗೆ ನಿರೀಕ್ಷಿತ ಆದಾಯ ಬರುತ್ತಿಲ್ಲ. ಸೂಕ್ತ ಕ್ರಮಕೈಗೊಂಡರೆ ಆದಾಯ ಹೆಚ್ಚಲಿದೆ ಎಂದರು. ಪಾಲಿಕೆ ಆಯುಕ್ತ ಸುರೇಶ ಇಟ್ನಾಳ ಮಾತನಾಡಿ, ‘ಅಗತ್ಯವಿದ್ದಲ್ಲಿ ಬಸ್ ಸ್ಟಾಪ್ ಹಾಗೂ ವಾಣಿಜ್ಯ ಮಳಿಗೆ ನಿರ್ಮಿಸಲಾಗುವುದು. ಯಾವ ಸ್ಥಳಗಳನ್ನು ಪಾರ್ಕಿಂಗ್‌ಗೆ ಬಳಸಿಕೊಳ್ಳಬಹುದು ಎಂದು ಪರಿಶೀಲನೆ ಮಾಡಿದ್ದೇವೆ. ಅದರಲ್ಲಿ ಬರುವ ಆದಾಯದ‌ ಶೇ 50ರಷ್ಟನ್ನು ಅಭಿವೃದ್ಧಿಗೆ ಹಾಗೂ ಉಳಿದದ್ದನ್ನು ಪಾರ್ಕಿಂಗ್ ಸ್ಥಳಗಳ ಅಭಿವೃದ್ಧಿಗೆ ವಿನಿಯೋಗಿಸಲಾಗುವುದು. ಉದ್ಯಾನದಲ್ಲಿ ನಂದಿನಿ ಪಾರ್ಲರ್ ಆರಂಭಿಸುವ ಕುರಿತು ಕೆಎಂಎಫ್‌ನಿಂದ ಪ್ರಸ್ತಾವ ಬಂದಿದ್ದು, ಪರಿಶೀಲನೆಯಲ್ಲಿದೆ’ ಎಂದರು.

ಪಾಲಿಕೆ ಮುಖ್ಯ ಲೆಕ್ಕಾಧಿಕಾರಿ ಶಂಕರಾನಂದ ಬನಶಂಕರಿ, ಸೂಪರಿಡೆಂಟೆಂಟ್ ಎಂಜಿನಿಯರ್‌ ತಿಮ್ಮಪ್ಪ, ಕೆಸಿಸಿಐ ಉಪಾಧ್ಯಕ್ಷ ಸಿದ್ದೇಶ್ವರ ಕಮ್ಮಾರ, ಬಂಜಾರ ಸಮಾಜದ‌ ರಾಜ್ಯ ಘಟಕದ ಅಧ್ಯಕ್ಷ ಪಾಂಡುರಂಗ ಪಮ್ಮಾರ, ಪಾಲಿಕೆ ಗುತ್ತಿಗೆದಾರರ ಸಂಘದ ಅಧ್ಯಕ್ಷ ಶರದ್‌ ದೊಡ್ಡಮನಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು