ಶನಿವಾರ, 14 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಹುಬ್ಬಳ್ಳಿ -ಅಗಡಿ ನಡುವೆ ಬಸ್ ವ್ಯವಸ್ಥೆ: ಗ್ರಾಮಸ್ಥರ ಹರ್ಷ

Published : 5 ಆಗಸ್ಟ್ 2024, 15:43 IST
Last Updated : 5 ಆಗಸ್ಟ್ 2024, 15:43 IST
ಫಾಲೋ ಮಾಡಿ
Comments

ಹುಬ್ಬಳ್ಳಿ: ಶಾಲಾ, ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಅನುಕೂಲವಾಗಲು ಹುಬ್ಬಳ್ಳಿ ಹಾಗೂ ಅಗಡಿ ಗ್ರಾಮಕ್ಕೆ ಬಸ್ ಸೌಕರ್ಯ ಕಲ್ಪಿಸುವ ಸಲುವಾಗಿ ಮಾಡಿದ್ದ ಮನವಿಗೆ ಸರ್ಕಾರ ಸ್ಪಂದಿಸಿ, ಹುಬ್ಬಳ್ಳಿ ಗ್ರಾಮಾಂತರ ವಿಭಾಗದಿಂದ ಬಸ್ ವ್ಯವಸ್ಥೆ ಮಾಡಿದ್ದು ಜನರು ಹರ್ಷ ವ್ಯಕ್ತಪಡಿಸಿದ್ದಾರೆ.

ಗ್ರಾಮ ಪಂಚಾಯಿತಿ ಸದಸ್ಯರು, ಸಂಗಪ್ಪ ಗಾಮಂಗಟ್ಟಿ, ಶೋಭಾ ಹೊಸಮನಿ, ತಿಪ್ಪಣ್ಣ, ಮಂಜು ಬಿರಣ್ಣವರ, ಶಂಕ್ರಮ್ಮ ಬಡಿಗೇರ, ಅನಸವ್ವ ಬ್ಯಾಟಿ ಹಾಗೂ ವಿದ್ಯಾರ್ಥಿಗಳು ಬಸ್‌ಗೆ ಪೂಜೆ ಸಲ್ಲಿಸಿ ಸಂಭ್ರಮಾಚರಿಸಿದರು.

ಅಗಡಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಸುರೇಶ ಮೂಕಪ ಸಂಗಣ್ಣವರ, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಸಾರಿಗೆ ಸಚಿವ ರಾಮಲಿಂಗಾರಡ್ಡಿ ಅವರಿಗೆ ಬಸ್‌ ಕಲ್ಪಿಸುವಂತೆ ಮನವಿ ಮಾಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT