ಹುಬ್ಬಳ್ಳಿ: ನಗರದ ಹೊರವಲಯದ ಗದಗ ರಸ್ತೆಯ ರಿಂಗ್ ರೋಡ್ ಸಮೀಪ ಹುಬ್ಬಳ್ಳಿಯಿಂದ ಹೊಸಪೇಟೆಗೆ ತೆರಳುತ್ತಿದ್ದ ಬಸ್ಗೆ ಕಿಡಿಗೇಡಿಗಳು ಕಲ್ಲು ತೂರಿದ್ದಾರೆ.

ಬಸ್ ಮುಂಭಾಗದ ಗಾಜು ಜಖಂಗೊಂಡಿದೆ. ಕೇಶ್ವಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

'ಹೊಸಪೇಟೆ ಘಟಕಕ್ಕೆ ಸೇರಿದ ಬಸ್ ಇದಾಗಿದ್ದು, ಬೆಳಿಗ್ಗೆ 7.15ರ ವೇಳೆ ಹೊಸೂರಿನ ಪ್ರಾದೇಶಿಕ ಬಸ್ ನಿಲ್ದಾಣದಿಂದ ಹೊರಟಿತ್ತು. ಸುಮಾರು 7.30ರ ವೇಳೆ ರಿಂಗ್ ರೋಡ್ ಬಳಿ ಇಬ್ಬರು ಮುಸುಕುಧಾರಿಗಳು ಕಲ್ಲು ತೂರಿ ಪರಾರಿಯಾಗಿರುವ ಮಾಹಿತಿಯಿದೆ. ಸಾರಿಗೆ ಸಂಸ್ಥೆ ಮುಷ್ಕರದ ಹಿನ್ನೆಲೆಯಲ್ಲಿ ಬಸ್ಗೆ ಕಲ್ಲು ತೂರಿರಬಹುದು' ಎಂದು ಪೊಲೀಸರು ತಿಳಿಸಿದ್ದಾರೆ.

ವಿದ್ಯಾನಗರದ ಬಸ್ ಡಿಪೋದಲ್ಲಿಯೂ ಧಾರವಾಡಕ್ಕೆ ತೆರಳುತ್ತಿದ್ದ ಬಸ್ಗೆ ಹಾಗೂ ಕುಂದಗೋಳ ಕ್ರಾಸ್ ಬಳಿ ಕುಂದಗೋಳಕ್ಕೆ ತೆರಳುತ್ತಿದ್ದ ಬಸ್ಗೆ ಕಿಡಿಗೇಡಿಗಳು ಕಲ್ಲು ತೂರಿದ್ದಾರೆ ಎಂದು ಸಾರಿಗೆ ಅಧಿಕಾರಿಯೊಬ್ಬರು ತಿಳಿಸಿದರು. ಈವರೆಗೂ ಪ್ರಕರಣ ದಾಖಲಾಗಿಲ್ಲ.
.LIVE | ಸಾರಿಗೆ ನೌಕರರ ಮುಷ್ಕರ: ರಸ್ತೆಗಿಳಿಯದ KSRTC ಬಸ್ಗಳು; ಸಂಚಾರದಲ್ಲಿ ಭಾರಿ ವ್ಯತ್ಯಯ.Photos | ಸಾರಿಗೆ ನೌಕರರ ಮುಷ್ಕರ: ಕಾದು ಕುಳಿತರೂ ಬರಲಿಲ್ಲ ಬಸ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.