ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿವಿಬಿ ಅಮೃತ ‌ಮಹೋತ್ಸವ‌ ಕಾರ್ಯಕ್ರಮಕ್ಕೆ ಕ್ಷಣಗಣನೆ...

Last Updated 28 ಜನವರಿ 2023, 5:23 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಇಲ್ಲಿನ ವಿದ್ಯಾನಗರದಲ್ಲಿರುವ ಬಿ.ವಿ.ಭೂಮರಡ್ಡಿ ಎಂಜಿನಿಯರಿಂಗ್ ಕಾಲೇಜಿನ ಅಮೃತ ಮಹೋತ್ಸವದ‌ ಕಾರ್ಯಕ್ರಮ ಆರಂಭಕ್ಕೆ‌ ಕ್ಷಣಗಣನೆ ‌ಶುರುವಾಗಿದೆ.

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ‌ ಸಚಿವ ಪ್ರಲ್ಹಾದ ಜೋಶಿ, ಶಾಸಕ ಜಗದೀಶ ಶೆಟ್ಟರ್, ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ, ಸಚಿವರಾದ ಮುರುಗೇಶ ನಿರಾಣಿ, ಸಿ.ಸಿ.ಪಾಟೀಲ ಸೇರಿದಂತೆ‌ ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ.

ಬಿ.ವಿ.ಬಿ ಕ್ಯಾಂಪಸ್ ನಲ್ಲಿರುವ ಎಂ. ಆರ್.‌ಸಾಖರೆ ಮೈದಾನದಲ್ಲಿ ಅಮೃತ ಮಹೋತ್ಸವ ಕಾರ್ಯಕ್ರಮಕ್ಕೆ ಬೃಹತ್ ಪೆಂಡಾಲ್ ಹಾಕಲಾಗಿದ್ದು, ಆರು ಎಲ್ಇಡಿ ಪರದೆಗಳನ್ನು ಹಾಕಲಾಗಿದೆ. ಅತಿಗಣ್ಯರು, ಗಣ್ಯರು ಹಾಗೂ ವಿದ್ಯಾರ್ಥಿಗಳು ಸೇರಿದಂತೆ ಅಂದಾಜು 12 ಸಾವಿರಕ್ಕೂ ಹೆಚ್ಚು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ.
ವೇದಿಕೆ ಕಾರ್ಯಕ್ರಮಕ್ಕೂ‌ ಮುನ್ನ ಅಮಿತ್ ಶಾ‌ ಅವರು ಬಿವಿಬಿ ಕ್ಯಾಂಪಸ್ ನಲ್ಲಿ ₹25 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಅಂತರರಾಷ್ಟ್ರೀಯ ಗುಣಮಟ್ಟದ ಡಾ.ಪ್ರಭಾಕರ ಕೋರೆ ಹೆಸರಿನ ಒಳಾಂಗಣ ಕ್ರೀಡಾಂಗಣವನ್ನು ಉದ್ಘಾಟಿಸಲಿದ್ದಾರೆ.

ತಿರುಪತಿಯ ವಿಶ್ವ ಧರ್ಮ ಚೇತನ ಮಂಚ್ ನ ಬ್ರಹ್ಮಶ್ರೀ ಗುರುದೇವ ಕಾರ್ಯಕ್ರಮದ ಸಾನ್ನಿಧ್ಯ ವಹಿಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT