ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕಾಂಗ್ರೆಸ್‌ನಿಂದ ಜನರಿಗೆ ಧಮಕಿ ಹಾಕುವ ಯತ್ನ: ಬಿ.ವೈ. ವಿಜಯೇಂದ್ರ

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ
Published 1 ಫೆಬ್ರುವರಿ 2024, 14:06 IST
Last Updated 1 ಫೆಬ್ರುವರಿ 2024, 14:06 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲದಿದ್ದರೆ ಗ್ಯಾರಂಟಿ ಯೋಜನೆಗಳನ್ನು ರದ್ದುಪಡಿಸುವುದಾಗಿ ಕಾಂಗ್ರೆಸ್‌ ಶಾಸಕ ಎಚ್‌.ಸಿ. ಬಾಲಕೃಷ್ಣ ಹೇಳುವ ಮೂಲಕ ಜನರಿಗೆ ಧಮಕಿ ಹಾಕುವ ಪ್ರಯತ್ನ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು. 

ನಗರದಲ್ಲಿ ಬೈಕ್‌ ರ‍್ಯಾಲಿ ನಡೆಸಿದ ನಂತರ ದೇಶಪಾಂಡೆ ನಗರದಲ್ಲಿರುವ ಪಕ್ಷದ ಕಚೇರಿ ಬಳಿ ಸಾರ್ವಜನಿಕರು ಹಾಗೂ ಕಾರ್ಯಕರ್ತರನ್ನು ಉದ್ದೇಶಿಸಿ ಅವರು ಮಾತನಾಡಿದರು.

‘ಜನರು ಶಾಸಕರ ಮಾತನ್ನು ಅರ್ಥ ಮಾಡಿಕೊಳ್ಳಬೇಕು. ಈಗಿನ ಪರಿಸ್ಥಿತಿಯಲ್ಲಿ ಬಿಜೆಪಿ– ಜೆಡಿಎಸ್‌ ಮೈತ್ರಿ ರಾಜ್ಯದ ಎಲ್ಲ 28 ಲೋಕಸಭಾ ಕ್ಷೇತ್ರಗಳನ್ನು ಗೆಲ್ಲುವ ಸ್ಥಿತಿ ಇದೆ’ ಎಂದು ನುಡಿದರು.

‘ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿಸಬೇಕೆಂದು ಹಲವು ಮುಖಂಡರು ಬಿಜೆಪಿ ಸೇರುತ್ತಿದ್ದಾರೆ. ಜಗದೀಶ ಶೆಟ್ಟರ್‌ ಅವರು ವಿಧಾನ ಪರಿಷತ್‌ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಕೊಟ್ಟು, ವಾಪಸ್ ಬಂದಿದ್ದಾರೆ. ಎಲ್ಲರೂ ಒಗ್ಗಟ್ಟಾಗಿ ದುಡಿಯೋಣ’ ಎಂದು ಹೇಳಿದರು.

‘ನಮ್ಮ ಮುಂದೆ ಲೋಕಸಭಾ ಚುನಾವಣೆ ಬಹುದೊಡ್ಡ ಸವಾಲು ಇದೆ. ಕಳೆದ ವರ್ಷ ಅನಿರೀಕ್ಷಿತವಾಗಿ ವಿಧಾನಸಭೆ ಚುನಾವಣೆಯಲ್ಲಿ ಪಕ್ಷಕ್ಕೆ ಸೋಲಾಗಿತ್ತು. ಲೋಕಸಭೆ ಚುನಾವಣೆಯನ್ನೂ ಗೆಲ್ಲುತ್ತೇವೆ ಎನ್ನುವ ಭ್ರಮೆಯಲ್ಲಿ ಕಾಂಗ್ರೆಸ್‌ನವರು ಇದ್ದರು. ಇತ್ತೀಚೆಗೆ ನಡೆದ ಪಂಚ ರಾಜ್ಯಗಳ ಚುನಾವಣೆಯ ಫಲಿತಾಂಶ ನೋಡಿ ಅವರ ಜಂಭಾಬಲವೇ ಅಡಗಿಹೋಗಿದೆ’ ಎಂದು ವ್ಯಂಗ್ಯವಾಡಿದರು.

ಶಾಸಕರಾದ ಅರವಿಂದ ಬೆಲ್ಲದ, ಮಹೇಶ ಟೆಂಗಿನಕಾಯಿ, ಎಂ.ಆರ್‌.ಪಾಟೀಲ, ಮುಖಂಡರಾದ ಜಗದೀಶ ಶೆಟ್ಟರ್‌, ಶಂಕರ ಪಾಟೀಲ ಮುನೇನಕೊಪ್ಪ, ಮಹಾನಗರ ಪಾಲಿಕೆ ಸದಸ್ಯ ರಾಜಣ್ಣ ಕೊರವಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT