ಗುರುವಾರ , ಜೂಲೈ 9, 2020
28 °C

ಹುಬ್ಬಳ್ಳಿ | ಬೆಳಿಗ್ಗೆ 6ಕ್ಕೆ ಕಾಮಗಾರಿ ಪರಿಶೀಲಿಸಿದ ಸಚಿವ‌ ಭೈರತಿ ಬಸವರಾಜ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ನಗರಾಭಿವೃದ್ಧಿ ಸಚಿವ‌ ಭೈರತಿ ಬಸವರಾಜ ಮಂಗಳವಾರ ಬೆಳಿಗ್ಗೆ 6 ಗಂಟೆಯಿಂದಲೇ ನಗರದಲ್ಲಿ ನಡೆದಿರುವ ವಿವಿಧ ಕಾಮಗಾರಿಗಳ ಪರಿಶೀಲನೆ ನಡೆಸಿದರು.

ಕಳೆದ‌ ವರ್ಷ ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದ ಉಣಕಲ್ ಹುಲಕೊಪ್ಪ ಸೇತುವೆ ನಿರ್ಮಾಣ ಕಾಮಗಾರಿ ನಡೆದಿದ್ದು, ಅದನ್ನು ವೀಕ್ಷಿಸಿದರು.

ಬೆಂಗೇರಿ ಕಾಂಪ್ಯಾಕ್ಟ್ ಸ್ಟೇಷನ್, ಸ್ಮಾರ್ಟ್ ಸಿಟಿ ಯೋಜನೆಯಡಿ ಜಾರಿಗೊಂಡಿರುವ ವಿವಿಧ ಕಾಮಗಾರಿಗಳನ್ನು ವೀಕ್ಷಿಸಿದರು. ಅದಕ್ಕೂ ಮುನ್ನ ಪೌರ ಕಾರ್ಮಿಕರೊಂದಿಗೆ ಭಾವಚಿತ್ರ ತೆಗೆಸಿಕೊಂಡು, ನಂತರ‌ ಚರ್ಚೆ ನಡೆಸಿದರು.

ಹುಡಾ ಅಧ್ಯಕ್ಷ ನಾಗೇಶ ಕಲಬುರ್ಗಿ, ಮಹಾನಗರ ಪಾಲಿಕೆ ಆಯುಕ್ತ ಸುರೇಶ ಇಟ್ನಾಳ ಉಪಸ್ಥಿತರಿದ್ದರು.


ಪೌರ ಕಾರ್ಮಿಕರ ಯೋಗಕ್ಷೇಮ ವಿಚಾರಿಸಿದರು

 


ಕಾಮಗಾರಿ ಪರಿಶೀಲಿಸಿದರು

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು