ಸಂಪುಟ ವಿಸ್ತರಣೆಯಾದರೆ ಸರ್ಕಾರ ಪತನ: ಶೆಟ್ಟರ್‌

7

ಸಂಪುಟ ವಿಸ್ತರಣೆಯಾದರೆ ಸರ್ಕಾರ ಪತನ: ಶೆಟ್ಟರ್‌

Published:
Updated:

ಹುಬ್ಬಳ್ಳಿ: ಶೀಘ್ರದಲ್ಲಿಯೇ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ಜೆಡಿಎಸ್‌ ಹಾಗೂ ಕಾಂಗ್ರೆಸ್‌ ಮುಖಂಡರು ಹೇಳುತ್ತಿದ್ದಾರೆ. ಆದರೆ, ಯಾವ ಕಾರಣಕ್ಕೂ ಸಂಪುಟ ವಿಸ್ತರಣೆ ಆಗುವುದಿಲ್ಲ ಎಂದು ಶಾಸಕ ಜಗದೀಶ ಶೆಟ್ಟರ್‌ ಹೇಳಿದರು.

ಬುಧವಾರ ಇಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು ‘ಸಮ್ಮಿಶ್ರ ಸರ್ಕಾರದಲ್ಲಿ ಸಾಕಷ್ಟು ಅಸಮಾಧಾನವಿದೆ. ಆದ್ದರಿಂದ ಉಪಚುನಾವಣೆಯ ನೆಪವೊಡ್ಡಿ ಸಂಪುಟ ವಿಸ್ತರಣೆ ಮುಂದೂಡಲಾಗುತ್ತದೆ. ಒಂದು ವೇಳೆ ವಿಸ್ತರಣೆಯಾದರೆ ಅಂದೇ ಸರ್ಕಾರ ಪತನವಾಗುತ್ತದೆ. ಇದನ್ನು ಈಗಲೇ ಬರೆದುಕೊಡುವೆ’ ಎಂದರು.

‘ಸರ್ಕಾರವನ್ನು ಅಸ್ಥಿರಗೊಳಿಸಲು ನಾವು ಅಪರೇಷನ್‌ ಕಮಲ ಮಾಡುತ್ತಿಲ್ಲ. ಅವರ ನಡುವಿನ ಅಸಮಾಧಾನದಿಂದಲೇ ಸರ್ಕಾರ ಉರುಳುತ್ತದೆ. ರಾಜ್ಯ ವಿಧಾನಸಭಾ ಚುನಾವಣೆ ವೇಳೆ ಸ್ವತಂತ್ರ ಲಿಂಗಾಯತ ಧರ್ಮಕ್ಕಾಗಿ ಕಾಂಗ್ರೆಸ್‌ ದೊಡ್ಡ ಹೋರಾಟ ಮಾಡಿತು. ಈಗ ಲೋಕಸಭಾ ಚುನಾವಣೆ ಬರುವುದಿಂದ ಈ ವಿಷಯವನ್ನು ಮತ್ತೆ ಮುನ್ನಲೆಗೆ ತರುತ್ತಿದೆ’ ಎಂದು ದೂರಿದರು.

ರಾಮನಗರ ಉಪಚುನಾವಣೆಯಲ್ಲಿ ಅನಿತಾ ಕುಮಾರಸ್ವಾಮಿ ಕಣಕ್ಕಿಳಿಯುತ್ತಾರೆ ಎನ್ನುವ ಸುದ್ದಿಗೆ ಪ್ರತಿಕ್ರಿಯಿಸಿದ ಶೆಟ್ಟರ್‌ ‘ಜೆಡಿಎಸ್‌ ಒಂದು ಕುಟುಂಬಕ್ಕೆ ಸೇರಿದ ಪಕ್ಷವೆಂಬುದು ಎಲ್ಲರಿಗೂ ಗೊತ್ತೇ ಇದೆ. ಆ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ಈಗ ತಮ್ಮ ಭವಿಷ್ಯದ ಬಗ್ಗೆ ಚಿಂತೆ ಮಾಡಬೇಕು. ಕಾಂಗ್ರೆಸ್ ಕೂಡ ಇದರಿಂದ ಹೊರತಲ್ಲ’ ಎಂದು ಉತ್ತರಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !