ಹುಬ್ಬಳ್ಳಿ: ಕುಂದಗೋಳ ಉಪ ಚುನಾವಣೆಯ ಗೆಲುವು, ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರಿಗೆ ಪ್ರತಿಷ್ಠೆಯ ಪ್ರಶ್ನೆಯಾಗಿ ಪರಿಣಮಿಸಿದೆ. ಅದಕ್ಕಾಗಿ, ತಮ್ಮ ಅಭ್ಯರ್ಥಿಯ ಗೆಲುವಿಗಾಗಿ ಉಭಯ ನಾಯಕರುಗಳು ಬಿಡುವಿಲ್ಲದ ಪ್ರಚಾರದಲ್ಲಿ ತೊಡಗಿದ್ದಾರೆ.

ಆಡಳಿತಾರೂಢ ಮೈತ್ರಿ ಸರ್ಕಾರದ ಸಚಿವರು ಮತ್ತು ನಾಯಕರು ಕ್ಷೇತ್ರದಲ್ಲಿ ಬೀಡುಬಿಟ್ಟು ಅಭ್ಯರ್ಥಿ ಕುಸುಮಾವತಿ ಶಿವಳ್ಳಿ ಗೆಲುವಿಗೆ ಶ್ರಮಿಸುತ್ತಿದ್ದರೆ, ಬಿಜೆಪಿ ಅಭ್ಯರ್ಥಿ ಎಸ್.ಐ. ಚಿಕ್ಕನಗೌಡ್ರ ಪರ ಬಿಜೆಪಿ ನಾಯಕರ ದಂಡು ಕ್ಷೇತ್ರದ ಗ್ರಾಮೀಣ ಭಾಗದಲ್ಲಿ ಬಿರುಸಿನ ಪ್ರಚಾರದ ಜತೆಗೆ, ರೋಡ್ ಷೋ ನಡೆಸುತ್ತಾ ಬೆವರು ಹರಿಸುತ್ತಿದೆ.

ಮೈತ್ರಿ ನಾಯಕರ ಸರಣಿ ಸಭೆ:ಕ್ಷೇತ್ರದ ಉಸ್ತುವಾರಿ ವಹಿಸಿಕೊಂಡಿರುವ ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಬುಧವಾರ ಬೆಳಿಗ್ಗೆ ಹುಬ್ಬಳ್ಳಿಯಲ್ಲಿ ಹಾಗೂ ಮತ್ತೊಬ್ಬ ಸಚಿವ ಸತೀಶ ಜಾರಕಿಹೊಳಿ ಕುಂದಗೋಳದಲ್ಲಿ ಸ್ಥಳೀಯ ಮುಖಂಡರೊಂದಿಗೆ ಚರ್ಚಿಸಿದರು. ಈ ಮಧ್ಯೆ ಸಚಿವ ಆರ್.ವಿ. ದೇಶಪಾಂಡೆ ಕೂಡ ಕ್ಷೇತ್ರಕ್ಕೆ ಭೇಟಿ ನೀಡಿ ಕೆಲವರ ಜತೆ ಮಾತುಕತೆ ನಡೆಸಿದರು.

‘ಸಮ್ಮಿಶ್ರ ಹಾಗೂ ಹಿಂದಿನ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಅಭಿವೃದ್ಧಿ ಕೆಲಸಗಳೇ ಮೈತ್ರಿ ಅಭ್ಯರ್ಥಿಯ ಗೆಲುವಿಗೆ ಶ್ರೀರಕ್ಷೆ. ಕುಸುಮಾವತಿ ಗೆಲ್ಲುವುದರಲ್ಲಿ ಅನುಮಾನವಿಲ್ಲ’ ಎಂದು ಸತೀಶ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದರು.

ಅನಾರೋಗ್ಯ ಲೆಕ್ಕಿಸದೆ ಪ್ರಚಾರ:ಶಾಸಕ ಶ್ರೀರಾಮುಲು, ಚಳಿ– ಜ್ವರ ಲೆಕ್ಕಿಸದೆ ಅಭ್ಯರ್ಥಿ ಚಿಕ್ಕನಗೌಡ್ರ ಅವರೊಂದಿಗೆ, ಕ್ಷೇತ್ರದ ಅಂಚಟಗೇರಿ ಮತ್ತು ಬೆಟದೂರಿನಲ್ಲಿ ಪ್ರಚಾರ ನಡೆಸಿದರು. ಸಂಜೆ ಶಾಸಕ ಜಗದೀಶ ಶೆಟ್ಟರ್, ಬಸನಗೌಡ ಪಾಟೀಲ ಯತ್ನಾಳ್ ಹಾಗೂ ಸಂಸದ ಪ್ರಹ್ಲಾದ ಜೋಶಿ, ಕುಂದಗೋಳ ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲಿ ಮತ ಯಾಚಿಸಿದರು.

‘ಎರಡೂ ಉಪ ಚುನಾವಣೆಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲ್ಲುವುದು ಖಚಿತ. ಆ ಮೂಲಕ ರಾಜ್ಯದಲ್ಲಿ ಮತ್ತೆ ಬಿಜೆಪಿ ಸರ್ಕಾರ ರಚಿಸುವ ನಮ್ಮ ಪ್ರಯತ್ನ ಫಲ ನೀಡಲಿದೆ’ ಎಂದು ಶ್ರೀರಾಮುಲುಬೆಟದೂರಿನಲ್ಲಿ ಹೇಳಿದರು.

ಶಿವಳ್ಳಿ ಸಾವಿನ ಬಗ್ಗೆ ಇಲ್ಲಸಲ್ಲದ ಆರೋಪ ಮಾಡುವ ಶ್ರೀರಾಮುಲು ಪೊಲೀಸ್ ಠಾಣೆಗೆ ಹೋಗಿ ದೂರು ಕೊಡಲಿ. ಇಂತಹ ಮಾತುಗಳನ್ನಾಡಿ ರಾಜಕೀಯದ ಗೌರವ ಹಾಳು ಮಾಡಬಾರದು. ನಮ್ಮ ಶ್ರೀರಾಮುಲು ಅಣ್ಣಾ ಸೇಡಿನ ರಾಜಕೀಯ ಮಾಡಲಿ, ನಾವು ಪ್ರೀತಿಯ ರಾಜಕಾರಣ ಮಾಡುತ್ತೇವೆ
– ಡಿ.ಕೆ.ಶಿವಕುಮಾರ್, ಸಚಿವ

ಸಚಿವರಾಗಿದ್ದ ಸಿ.ಎಸ್. ಶಿವಳ್ಳಿ ಅವರ ಸಾವಿಗೆ ಮೈತ್ರಿ ಸರ್ಕಾರದ ತೀವ್ರ ಒತ್ತಡವೇ ಕಾರಣ. ಆ ಶಾಪ ಸರ್ಕಾರಕ್ಕೆ ತಟ್ಟದೆ ಬಿಡುವುದಿಲ್ಲ
– ಶ್ರೀರಾಮುಲು, ಶಾಸಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.