ಬುಧವಾರ, ಸೆಪ್ಟೆಂಬರ್ 30, 2020
21 °C

ಗಾಂಜಾ ಸಾಗಾಟ: ಇಬ್ಬರ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹುಬ್ಬಳ್ಳಿ: ಗಾಂಜಾ ಸಾಗಿಸುತ್ತಿದ್ದ ಇಬ್ಬರನ್ನು ಬಂಧಿಸಿರುವ ಆರ್ಥಿಕ ಮತ್ತು ಮಾದಕ ವಸ್ತುಗಳ ಅಪರಾಧ ಠಾಣೆ ಪೊಲೀಸರು, ₹25 ಸಾವಿರ ಮೌಲ್ಯದ ಅರ್ಧ ಕೆ.ಜಿ ಗಾಂಜಾ, ರಾಯಲ್ ಎನ್‌ಫಿಲ್ಡ್ ಬೈಕ್ ಹಾಗೂ ಎರಡು ಮೊಬೈಲ್ ವಶಪಡಿಸಿಕೊಂಡಿದ್ದಾರೆ.

ಗುರುನಾಥನಗರದ ನೂರ್ ಅಹಮದ್ (24) ಹಾಗೂ ಚಂದ್ರನಾಥನಗರದ ಅಕ್ಷಯ ವೇರ್ಣೆಕರ ಬಂಧಿತರು. ಆರೋಪಿಗಳು ತೋಳನಕೆರೆ ಸಮೀಪದ ಸೇತುವೆ ಬಳಿ ಬೈಕ್‌ನಲ್ಲಿ ಗಾಂಜಾ ಸಾಗಿಸುತ್ತಿದ್ದರು. ಈ ಕುರಿತು ಸಿಕ್ಕ ಮಾಹಿತಿ ಮೇರೆಗೆ, ಕಾರ್ಯಾಚರಣೆ ನಡೆಸಿ ಮಾಲು ಸಮೇತ ಇಬ್ಬರನ್ನು ಬಂಧಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಕಾರ್ಯಾಚರಣೆಯಲ್ಲಿ ಇನ್‌ಸ್ಪೆಕ್ಟರ್ ಎನ್.ಸಿ. ಕಾಡದೇವರಮಠ, ಸಿಬ್ಬಂದಿ ಬಿ.ಕೆ. ಹೂಗಾರ, ಸಿ.ಎಂ. ಕಂಬಾಳಿಮಠ, ರವಿ ಕೋಳಿ, ಎಂ.ಡಿ. ಬಡಿಗೇರ, ವೈ.ಎಫ್. ದಾಸಣ್ಣನವರ, ಪಿ.ಬಿ. ಹಿರಗಣ್ಣನವರ, ಮೋಹನ ಈಳಿಗೇರ ಹಾಗೂ ರಾಕೇಶ ಗೋರ್ಕಲ ಭಾಗವಹಿಸಿದ್ದರು.

ಅವಳಿನಗರದಲ್ಲಿ ಮಾದಕ ವಸ್ತು ಸಾಗಾಟ ಮತ್ತು ಮಾರಾಟ ಮಾಡುವವರ ವಿರುದ್ಧ ಕಾರ್ಯಾಚರಣೆಗೆ ಇಳಿದಿರುವ ಪೊಲೀಸರು, ಮೂರು ದಿನದಲ್ಲಿ ಆರು ಮಂದಿಯನ್ನು ಬಂಧಿಸಿದ್ದಾರೆ. ಇದುವರೆಗೆ ಏಳೂವರೆ ಕೆ.ಜಿ ಗಾಂಜಾ ಜಪ್ತಿ ಮಾಡಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು