ಗುರುವಾರ , ಮಾರ್ಚ್ 30, 2023
24 °C

ಹುಬ್ಬಳ್ಳಿ: ಗಾಂಜಾ ಸಾಗಿಸುತ್ತಿದ್ದ ಇಬ್ಬರ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ನಗರದಲ್ಲಿ ಗಾಂಜಾ ಮಾರಾಟದ ಜಾಲದ ಬೆನ್ನು ಹತ್ತಿರುವ ಪೊಲೀಸರು ಶುಕ್ರವಾರ ಹಳೇ ಹುಬ್ಬಳ್ಳಿಯ ತಿಮ್ಮಸಾಗರ ರಸ್ತೆಯಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಕಾರ್ಯಾಚರಣೆ ನಡೆಸಿದ ಸಿಸಿಬಿ ಪೊಲೀಸರು ಆರೋಪಿಗಳಿಂದ ಒಂದು ಕೆ.ಜಿ 796 ಗ್ರಾಂ ಗಾಂಜಾ ವಶಕ್ಕೆ ಪಡೆದುಕೊಂಡಿದ್ದಾರೆ‌. ಧಾರವಾಡದಿಂದ ಹಳೇ ಹುಬ್ಬಳ್ಳಿ ಕಡೆಗೆ ಬರುತ್ತಿದ್ದ ವಿಶ್ವನಾಥ ಕರಡಿಗುಡ್ಡ (35) ನರೇಶಕುಮಾರ ನಾಯಕಂಟಿ (26) ಬಂಧಿತ ಆರೋಪಿ ಗಳು.

ಬಂಧಿತರಿಂದ ಒಂದು ಜೂಪಿಟರ್ ಬೈಕ್, ಎರಡು ಮೊಬೈಲ್ ವಶ ಪಡಿಸಿಕೊಳ್ಳಲಾಗಿದೆ. ಹುಬ್ಬಳ್ಳಿಯ ಸಿಸಿಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಒಟ್ಟು ನಾಲ್ಚರು ಬಂಧನ: ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಗುರುವಾರ ಉಪನಗರ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದರು. ಹೀಗಾಗಿ ಬಂಧಿತ  ಆರೋಪಿಗಳ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ. ಗುರುವಾರದ ಪ್ರಕರಣದಲ್ಲಿ 5 ಕೆ.ಜಿ ಗಾಂಜಾ ವಶಪಡಿಸಿಕೊಳ್ಳಲಾಗಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು