ಹುಬ್ಬಳ್ಳಿ: ಚಲಿಸುತ್ತಿದ್ದ ಕಾರಿನ ಚಕ್ರ ಸ್ಫೋಟಗೊಂಡು ಸರಕು ಸಾಗಣೆ ಲಾರಿಗೆ ಡಿಕ್ಕಿ ಹೊಡೆದಿದ್ದರಿಂದ, ಮಹಿಳೆಯೊಬ್ಬರು ಮೃತಪಟ್ಟು, ಮೂವರು ಗಾಯಗೊಂಡಿದ್ದಾರೆ. ಹುಬ್ಬಳ್ಳಿಯ ಹೊರವಲಯದ ಗಬ್ಬೂರು ವೃತ್ತದ ಬಳಿ ಘಟನೆ ನಡೆದಿದೆ.

ಬೆಂಗಳೂರಿನ ಜಯನಗರದ ಎಲ್ಐಸಿ ಕಾಲೊನಿಯ ಸೌಭಾಗ್ಯ ಶಿವಾನಂದ (85) ಮೃತಪಟ್ಟವರು. ಅವರ ಮಕ್ಕಳಾದ ಪ್ರಭು, ವಿಜಯ್ ಹಾಗೂ ಕಾರು ಚಾಲಕ ಆನಂದ ಗಾಯಗೊಂಡಿದ್ದಾರೆ. ಎಲ್ಲರನ್ನೂ ನಗರದ ಬಾಲಾಜಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಭು ಅವರ ಸ್ಥಿತಿ ಗಂಭೀರವಾಗಿದೆ ಎಂದು ಹುಬ್ಬಳ್ಳಿಯ ದಕ್ಷಿಣ ಸಂಚಾರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಎ.ಬಿ. ಜಮಾದಾರ ತಿಳಿಸಿದರು.

ಕೆಲಸ ನಿಮಿತ್ತ ಮೂವರೂ ಬೆಳಿಗ್ಗೆ ಕಾರಿನಲ್ಲಿ ಬಾಗಲಕೋಟೆಗೆ ಹೋಗುತ್ತಿದ್ದರು. ಗಬ್ಬೂರು ವೃತ್ತದ ಸಮೀಪ ಬರುತ್ತಿದ್ದಂತೆ ಕಾರಿನ ಚಕ್ರ ಸ್ಫೋಟಗೊಂಡಿದೆ. ಬಳಿಕ, ರಸ್ತೆ ವಿಭಜಕ ಹಾಗೂ ರಸ್ತೆ ಪಕ್ಕದಲ್ಲಿದ್ದ ಸರಕು ಸಾಗಣೆ ಲಾರಿಗೆ ಕಾರು ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಸೌಭಾಗ್ಯ ಅವರು ಸ್ಥಳದಲ್ಲೇ ಮೃತಪಟ್ಟರು ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.