ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುಬ್ಬಳ್ಳಿ: ಸರಕು ತುಂಬಿದ ಲಾರಿ ಪಲ್ಟಿ, ತಪ್ಪಿದ ಅನಾಹುತ

Last Updated 30 ಆಗಸ್ಟ್ 2020, 6:16 IST
ಅಕ್ಷರ ಗಾತ್ರ
ADVERTISEMENT
""

ಹುಬ್ಬಳ್ಳಿ: ನಗರದ ಹಳೇ ಕೋರ್ಟ್ ವೃತ್ತದ ಬಳಿ ಭಾನುವಾರ ಬೆಳಿಗ್ಗೆ ಸರಕು ತುಂಬಿದ ಲಾರಿಯೊಂದು ಪಲ್ಟಿಯಾಗಿದೆ.

ಘಟನೆಯಲ್ಲಿ ಲಾರಿ ಚಾಲಕ ರಾಮಣ್ಣ ಅವರಿಗೆ ಗಾಯವಾಗಿದ್ದು, ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ತಿರುವಿನಲ್ಲಿ ಚಾಲಕ ಲಾರಿಯ ನಿಯಂತ್ರಣ ಕಳೆದುಕೊಂಡಿದ್ದರಿಂದ ಪಲ್ಟಿಯಾಗಿದೆ. ರಸ್ತೆಯಲ್ಲಿ ಡೀಸೆಲ್ ಸೋರಿಕೆಯಾಗಿದ್ದರಿಂದ ರಸ್ತೆಯಲ್ಲಿ ವಾಹನಗಳ ಸಂಚಾರವನ್ನು ಕೆಲ ಹೊತ್ತು ನಿರ್ಬಂಧಿಸಲಾಗಿದೆ. ಡೀಸೆಲ್ ಸೋರಿಕೆಯಾಗಿರುವ ಜಾಗದಲ್ಲಿ ನೀರು ಹಾಯಿಸಲಾಗಿದೆ. ಬಳಿಕ, ಲಾರಿಯನ್ನು ತೆರವುಗೊಳಿಸಲಾಗಿದೆ ಎಂದು ಪೂರ್ವ ಸಂಚಾರ ಠಾಣೆ ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT