ಭಾನುವಾರ, 3 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೈಜ್ಞಾನಿಕವಾಗಿ ಜಾತಿ ಜನಗಣತಿ ಆಗಲಿ: ಪ್ರಲ್ಹಾದ ಜೋಶಿ

Published 25 ಡಿಸೆಂಬರ್ 2023, 16:31 IST
Last Updated 25 ಡಿಸೆಂಬರ್ 2023, 16:31 IST
ಅಕ್ಷರ ಗಾತ್ರ

ಹುಬ್ಬಳ್ಳಿ: ‘ಜಾತಿ ಜನಗಣತಿ ವರದಿಗೆ ಕಾಂಗ್ರೆಸ್‌ನಲ್ಲೇ ವಿರೋಧ ವ್ಯಕ್ತವಾಗಿದೆ. ವೈಜ್ಞಾನಿಕವಾಗಿ ಜಾತಿ ಜನಗಣತಿ ಆಗಬೇಕು ಎಂಬುದನ್ನು ನಾನೂ ಒಪ್ಪುತ್ತೇನೆ’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.

ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದಲ್ಲಿ ಕಾಂಗ್ರೆಸ್‌ನವರೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಹಿಂದೆ ಜಾತಿ ಗಣತಿ ಆಗಿಲ್ಲ, ಜಾತಿ ಸರ್ವೆ ಮಾತ್ರ ಆಗಿದೆ’ ಎಂದರು.

‘ನಮ್ಮ ಸರ್ಕಾರ ಇದ್ದಾಗ ಹಿಜಾಬ್‌ ನಿಷೇಧ ಮಾಡಿಲ್ಲ. ಆದರೂ ಜನರ ಭಾವನೆ ಕೆರಳಿಸಲು, ಮತ ಬ್ಯಾಂಕ್ ರಾಜಕಾರಣಕ್ಕೆ ಕಾಂಗ್ರೆಸ್‌ನವರು ಮತ್ತೆ ಹಿಜಾಬ್ ವಿಷಯವನ್ನು ಮುನ್ನೆಲೆಗೆ ತಂದಿದ್ದಾರೆ. ದುರುದ್ದೇಶದಿಂದ ಈ ರೀತಿ ಮಾಡಲಾಗುತ್ತಿದೆ. ಇದರ ಪರಿಣಾಮವನ್ನು ಅವರು ಎದುರಿಸಬೇಕಾಗುತ್ತದೆ’ ಎಂದರು.

‘ಕಾಂಗ್ರೆಸ್‌ನವರು ಸಮಯಕ್ಕೆ ತಕ್ಕಂತೆ ಬದಲಾಗುತ್ತಾರೆ. ಮಧ್ಯಪ್ರದೇಶದಲ್ಲಿ ರಾಹುಲ್‌ ಗಾಂಧಿ ಜನಿವಾರ ಪ್ರದರ್ಶಿಸಿ ತಾವು ಹಿಂದೂ ಎಂದು ಬಿಂಬಿಸಿಕೊಳ್ಳುತ್ತಾರೆ. ಇದು ಅವರ ದ್ವಂದ್ವ ನಿಲುವು. ಅವರ ರೀತಿ ಸಿದ್ದರಾಮಯ್ಯ ಅವರು ವರ್ತಿಸುತ್ತಿದ್ದಾರೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT