ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಾಪುರುಷರಿಗೆ ಅವಮಾನ, ಸಿಬಿಐ ತನಿಖೆ ನಡೆಸಿ: ಎಎಪಿ

Last Updated 24 ಡಿಸೆಂಬರ್ 2021, 15:40 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣ ಹಾಗೂ ಬೆಂಗಳೂರಿನಲ್ಲಿ ಶಿವಾಜಿ ಮೂರ್ತಿಗೆ ಅವಮಾನ ಮಾಡಿದ ಕೃತ್ಯದ ಹಿಂದೆ ಯಾರ‍್ಯಾರು ಇದ್ದಾರೆ ಎಂಬುದನ್ನು ಪತ್ತೆ ಹಚ್ಚಲು ಸಿಬಿಐ ತನಿಖೆ ಮಾಡಿಸಬೇಕು ಎಂದು ಆಮ್‌ ಆದ್ಮಿ ಪಕ್ಷದ ಕಾರ್ಯಕರ್ತರು ಶುಕ್ರವಾರ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು.

ಕನ್ನಡ, ಮರಾಠಿ ಭಾಷೆಯ ಗಲಭೆಯಲ್ಲಿ ಮಹಾಪುರುಷರಾದ ಸಂಗೊಳ್ಳಿ ರಾಯಣ್ಣ, ಶಿವಾಜಿ ಮಾಹಾರಾಜರಿಗೆ ಅವಮಾನ ಮಾಡಲಾಗುತ್ತಿದೆ. ಜಾತಿ, ಧರ್ಮ, ಭಾಷೆ, ಗಡಿಗಳಿಗೆ ಸಂಬಂಧಪಟ್ಟ ಸಾಕಷ್ಟು ಗಲಭೆಗಳು ದೇಶದಲ್ಲಿ ನಡೆಯುತ್ತ ಬಂದಿದೆ. ಈ ಗಲಭೆಗಳನ್ನು ಪ್ರಚೋದಿಸುವ ಮೂಲಕ ಕೆಲವರು ರಾಜಕೀಯ ಮಾಡುತ್ತಿದ್ದಾರೆ ಎಂದು ಮನವಿಯಲ್ಲಿ ಆರೋಪಿಸಿದ್ದಾರೆ.

ಮಹಾ ಪುರುಷರು ಒಂದು ಸಮುದಾಯ, ಜಿಲ್ಲೆ, ರಾಜ್ಯಕ್ಕೆ ಸೀಮಿತರಾಗದೆ, ರಾಷ್ಟ್ರದ ಒಳಿತಿಗಾಗಿ ಪ್ರಾಣ ತ್ಯಾಗ ಮಾಡಿದವರು. ಅವರನ್ನು ಗೌರವಿಸುವುದು ಪ್ರತಿ ನಾಗರಿಕನ ಕರ್ತವ್ಯ ಎಂದಿದ್ದಾರೆ.

ಮನವಿ ಸಲ್ಲಿಸುವ ಪೂರ್ವ ಕಾರ್ಯಕರ್ತರು ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿರುವ ರಾಯಣ್ಣ ಮೂರ್ತಿ ಶುಚಿಗೊಳಿಸಿದರು. ವಸಂತಕುಮಾರ ಬುಡಗಿ, ವಿಕಾಸ ಸೊಪ್ಪಿನ, ಶಶಿಕುಮಾರ ಸುಳ್ಳದ, ಮಲ್ಲಪ್ಪ ತಡಸದ, ನವೀನಸಿಂಗ್‌ ರಜಪೂತ್‌, ಮಲ್ಲಿಕಾರ್ಜುನಯ್ಯ ಹಿರೇಮಠ, ಹಸನಸಾಬ್‌ ಇನಾಂದಾರ್‌, ಸಮತೋಷ ಮಾನೆ, ಡೇನಿಯಲ್‌ ಇಕೊಸ, ದೀಪಿಕಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT