ಸೋಮವಾರ, 22 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುಬ್ಬಳ್ಳಿ | ಸಿಸಿಬಿ ದಾಳಿ: ₹4.42 ಲಕ್ಷ ಮೌಲ್ಯದ ಪಡಿತರ ಅಕ್ಕಿ ವಶ

Published 9 ಡಿಸೆಂಬರ್ 2023, 7:53 IST
Last Updated 9 ಡಿಸೆಂಬರ್ 2023, 7:53 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿದ್ದ ಇಲ್ಲಿನ ಅಮರಗೋಳದ ಎಪಿಎಂಸಿಯ ಗೋದಾಮಿನ ಮೇಲೆ ದಾಳಿ ನಡೆಸಿದ ಸಿಸಿಬಿ ಪೊಲೀಸರು, ಆರೋಪಿಯೊಬ್ಬನನ್ನು ಬಂಧಿಸಿ, ₹4.42 ಲಕ್ಷ ಮೌಲ್ಯದ 130 ಕ್ವಿಂಟಲ್ ಅಕ್ಕಿ ವಶಪಡಿಸಿಕೊಂಡಿದ್ದಾರೆ.

ಗೋದಾಮಿನ ಮಾಲೀಕ ವೀರಾಪುರ ಓಣಿಯ ನಿವಾಸಿ ಸಂದೀಪ ಜರತಾರಘರ ಬಂಧಿತ ವ್ಯಕ್ತಿ.

ಸಾರ್ವಜನಿಕರಿಗೆ ವಿತರಣೆ ಮಾಡಬೇಕಿದ್ದ ಪಡಿತರ ಅಕ್ಕಿಯನ್ನು ಗೋದಾಮಿನಲ್ಲಿ ಅಕ್ರಮವಾಗಿ ಸಂಗ್ರಹಿಸಿ, ಕಾಳಸಂತೆಯಲ್ಲಿ ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಯೋಜನೆ ರೂಪಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ನವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT