ಮಂಗಳವಾರ, ಮಾರ್ಚ್ 9, 2021
19 °C

ಸಿ.ಡಿ. ವಿಚಾರ; ಮುಖ್ಯಮಂತ್ರಿಯನ್ನು ಹೆದರಿಸುವ ತಂತ್ರ: ಪ್ರಲ್ಹಾದ ಜೋಶಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ಯಾವ ಸಿ.ಡಿ. ಇಲ್ಲದಿದ್ದರೂ ಇದನ್ನೇ ಮುಂದಿಟ್ಟುಕೊಂಡು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರನ್ನು ಹೆದರಿಸುವ ತಂತ್ರವನ್ನು ಪಕ್ಷದ ಅತೃಪ್ತ ಶಾಸಕರು ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಟೀಕಿಸಿದರು.

ನಗರದಲ್ಲಿ ಶುಕ್ರವಾರ ಮಾಧ್ಯಮದವರ ಜೊತೆ ಮಾತನಾಡಿದ ಅವರು ‘ಸಿ.ಡಿ. ಎಂಬುದು ಇಲ್ಲವೇ ಇಲ್ಲ. ಇರುವುದು ನಿಜವೇ ಆದರೆ ಅದನ್ನು ಇಟ್ಟುಕೊಂಡು ಬೆದರಿಸುವ ತಂತ್ರ ಯಾಕೆ ಮಾಡಬೇಕು? ಇದ್ದರೆ ಬಿಡುಗಡೆ ಮಾಡಲಿ ಎಂದು ಸ್ವತಃ ಮುಖ್ಯಮಂತ್ರಿಯವರೇ ಬಹಿರಂಗವಾಗಿ ಹೇಳಿದ್ದಾರಲ್ಲವೇ’ ಎಂದು ಪ್ರಶ್ನಿಸಿದರು.

ಸಚಿವ ಸ್ಥಾನ ಸಿಗದ ಕಾರಣಕ್ಕೆ ಕೆಲ ಶಾಸಕರು ಅಸಮಾಧಾನಗೊಂಡಿದ್ದಾರಲ್ಲ ಎನ್ನುವ ಪ್ರಶ್ನೆಗೆ ‘ರಾಜಕಾರಣಿಗಳಿಗೆ ಮಹದಾಸೆ ಇರುವುದು ಸಹಜ, ಏನೇ ಇದ್ದರೂ ಪಕ್ಷದ ವೇದಿಕೆಯಲ್ಲಿ ಮಾತ್ರ ಚರ್ಚಿಸಬೇಕು. ಬಹಿರಂಗ ಹೇಳಿಕೆ ಕೊಡಬಾರದು. ಈಗಿನ ಎಲ್ಲ ಪರಿಸ್ಥಿತಿಯನ್ನು ಯಡಿಯೂರಪ್ಪ ಅವರು ಸಮರ್ಥವಾಗಿ ಎದುರಿಸುತ್ತಾರೆ. ಅಷ್ಟೊಂದು ರಾಜಕೀಯ ಅನುಭವ ಅವರಿಗಿದೆ’ ಎಂದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು