ಸೋಮವಾರ, ಜುಲೈ 4, 2022
24 °C

ಧಾರವಾಡ | ಕೀಟಜನ್ಯ ರೋಗ: ಜಾಗೃತಿಗೆ ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಧಾರವಾಡ: ‘ಮಳೆಗಾಲ ಆರಂಭ ಆಗಿರುವುದರಿಂದ ಡೆಂಗಿ, ಚಿಕುನ್‌ ಗುನ್ಯ ಸೇರಿದಂತೆ ಕೀಟ ಜನ್ಯ ರೋಗಗಳ ನಿಯಂತ್ರಣ ಕುರಿತು ಆರೋಗ್ಯ ಇಲಾಖೆಯು ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಮುಂಜಾಗ್ರತವಾಗಿ ಸುರಕ್ಷಾ ಕ್ರಮ ಕೈಗೊಳ್ಳಬೇಕು. ಸಂಬಂಧಿತ ಇಲಾಖೆಗಳು ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಪರಸ್ಪರ ಸಮನ್ವಯದಿಂದ ಕೆಲಸ ನಿರ್ವಹಿಸಬೇಕು’ ಎಂದು ಜಿಲ್ಲಾ ಪಂಚಾಯ್ತಿ ಸಿಇಒ ಡಾ. ಸುರೇಶ ಇಟ್ನಾಳ ತಿಳಿಸಿದರು.

ನಗರದ ಜಿಲ್ಲಾ ಪಂಚಾಯ್ತ ಸಭಾಭವನದಲ್ಲಿ ಮಂಗಳವಾರ ಜರುಗಿದ ಜಿಲ್ಲಾಮಟ್ಟದ ಅಂತರ ಇಲಾಖಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಮಲೇರಿಯಾ, ಡೆಂಗಿ, ಚಿಕುನ್ ಗುನ್ಯ, ಮೆದುಳು ಜ್ವರ ಮತ್ತು ಇತರೆ ಸಾಂಕ್ರಾಮಿಕ ರೋಗಗಳ ನಿಯಂತ್ರಣದಲ್ಲಿ ವಿವಿಧ ಇಲಾಖೆಗಳ ಪಾತ್ರ ಬಹುಮುಖ್ಯ. ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಗುಂಡಿಗಳು ಮುಚ್ಚಿಸುವುದರ ಮೂಲಕ ನೀರು ಸಂಗ್ರಹವಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಗ್ರಾಮ ಪಂಚಾಯ್ತಿಗಳು ಸೊಳ್ಳೆ ಉತ್ಪತ್ತಿ ತಾಣಗಳ ನಿವಾರಣೆ ಹಾಗೂ ಗ್ರಾಮ ನೈರ್ಮಲ್ಯ ಕಾರ್ಯಕ್ರಮಗಳನ್ನು ಸಂಘಟಿಸುವ ಮೂಲಕ ಸಕ್ರಿಯವಾಗಿ ಪಾಲ್ಗೊಳ್ಳಬೇಕು’ ಎಂದರು.

‘ನಗರ, ಪಟ್ಟಣ ಪ್ರದೇಶಗಳಲ್ಲಿ ಸುರಕ್ಷಿತ ನೀರು ಸರಬರಾಜು, ಚರಂಡಿ ಸ್ವಚ್ಛತೆ, ನೀರು ಸಂಗ್ರಹವಾಗದಂತೆ ಜಾಗೃತಿ ವಹಿಸಬೇಕು. ರಸ್ತೆ ಬದಿಯಲ್ಲಿ ತೆರೆದ ವಾತಾವರಣದಲ್ಲಿ ಕತ್ತರಿಸಿದ ಹಣ್ಣುಗಳ ಮಾರಾಟ ನಿಷೇಧಿಸಲು ಮತ್ತು ಹೋಟೆಲ್‌ಗಳಲ್ಲಿ ಸ್ವಚ್ಛತೆ, ನೈರ್ಮಲ್ಯ ಕಾಪಾಡುವಂತೆ ನಗರ ಸ್ಥಳೀಯ ಸಂಸ್ಥೆಯ ಮುಖ್ಯಸ್ಥರು ಕಾನೂನು ರೀತಿ ಕ್ರಮ ವಹಿಸಬೇಕು. ನೀರು ಸರಬರಾಜು ಪೈಪ್‌ಗಳನ್ನು ಆಗಿಂದಾಗ್ಗೆ ಪರೀಕ್ಷಿಸುವುದರೊಂದಿಗೆ ಸೋರಿಕೆ ತಡೆಗಟ್ಟಬೇಕು’ ಎಂದು ಸೂಚಿಸಿದರು.

ಡಿಎಚ್‌ಒ ಡಾ.ಬಿ.ಸಿ. ಕರಿಗೌಡರ, ಟಿ.ಪಿ. ಮಂಜುನಾಥ, ಡಾ. ಶಿವಕುಮಾರ ಮಾನಕರ, ಡಾ. ಶಶಿ ಪಾಟೀಲ, ಡಾ. ಸುಜಾತಾ ಹಸವಿಮಠ, ಡಾ. ಎಸ್.ಬಿ. ನಿಂಬಣ್ಣವರ, ಡಾ.ಎಸ್.ಎಂ. ಹೊನಕೇರಿ, ಡಾ. ಮಂಜುನಾಥ ಎಸ್., ಉಮೇಶ ಕೊಂಡಿ, ಡಾ.ಎಚ್.ಎಚ್. ಕುಕನೂರು, ಡಾ. ಶ್ರೀಧರ ದಂಡಪ್ಪನವರ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು