ಭಾನುವಾರ, 15 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಜಿಎಸ್‌ಟಿಯಲ್ಲಿ ಬದಲಾವಣೆ: ಉದ್ಯಮಿಗಳಿಗೆ ಜಾಗೃತಿ

Published : 21 ಆಗಸ್ಟ್ 2024, 16:07 IST
Last Updated : 21 ಆಗಸ್ಟ್ 2024, 16:07 IST
ಫಾಲೋ ಮಾಡಿ
Comments

ಹುಬ್ಬಳ್ಳಿ: ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯ ತೆರಿಗೆ ಸಮಿತಿಯಿಂದ ಸರಕು ಮತ್ತು ಸೇವಾ ತೆರಿಗೆಯಲ್ಲಿ (ಜಿಎಸ್‌ಟಿ) ಇತ್ತೀಚಿನ ಬದಲಾವಣೆ ಕುರಿತ ವಿಚಾರ ಸಂಕಿರಣವನ್ನು ಸಂಸ್ಥೆಯ ಸಭಾಂಗಣದಲ್ಲಿ ಬುಧವಾರ ಆಯೋಜಿಸಲಾಗಿತ್ತು.

ಲೆಕ್ಕಪರಿಶೋಧಕ ಶಂಭುಲಿಂಗಪ್ಪ ಪಾಟೀಲ ಅವರು, ಆದಾಯ ತೆರಿಗೆ ಕಾಯ್ದೆಯ ತಿದ್ದುಪಡಿ, ಪರಿಷ್ಕೃತ ತೆರಿಗೆ ಪದ್ಧತಿ ಕುರಿತು ಮಾಹಿತಿ ನೀಡಿದರು. ಲೆಕ್ಕಪರಿಶೋಧಕ ಕಿರಣ್‌ ಶಾವಿ ಅವರು, ಜಿಎಸ್‌ಟಿ ಕಾಯ್ದೆಯಲ್ಲಿನ ಬದಲಾವಣೆ ಬಗ್ಗೆ ತಿಳಿಸಿದರು. ಉದ್ದಿಮೆದಾರರೊಂದಿಗೆ ಸಂವಾದ ನಡೆಯಿತು.

ಸಂಸ್ಥೆಯ ಅಧ್ಯಕ್ಷ ಎಸ್‌.ಪಿ. ಸಂಶಿಮಠ, ತೆರಿಗೆ ಸಮಿತಿ ಅಧ್ಯಕ್ಷ ಕಾರ್ತಿಕ ಶೆಟ್ಟಿ, ಗೌರವ ಕಾರ್ಯದರ್ಶಿ ರವೀಂದ್ರ ಎಸ್‌. ಬಳಿಗಾರ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT