ಶನಿವಾರ, 13 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮುಖ್ಯಮಂತ್ರಿ ಬದಲಾವಣೆ ವಿಚಾರ | ಆಡಳಿತ ವ್ಯವಸ್ಥೆ ಮೇಲೆ‌ ಪರಿಣಾಮ: ಸಚಿವ ಜೋಶಿ

Published 30 ಜೂನ್ 2024, 8:15 IST
Last Updated 30 ಜೂನ್ 2024, 8:15 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಮುಖ್ಯಮಂತ್ರಿಯನ್ನು ಬದಲಾಯಿಸುವುದು, ಬಿಡುವುದು ಆ ಪಕ್ಷದ ಆಂತರಿಕ ವಿಷಯ. ಇದನ್ನು ಬಹಿರಂಗವಾಗಿ‌ ಚರ್ಚೆ ಮಾಡುತ್ತಿರುವುದರಿಂದ ಆಡಳಿತ ವ್ಯವಸ್ಥೆ ಮೇಲೆ‌ ಪರಿಣಾಮ ಬೀರುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆಚ್ಚುವರಿ ಡಿಸಿಎಂ ಹುದ್ದೆ ಬಗ್ಗೆ ಬಹಿರಂಗ ಹೇಳಿಕೆ ನೀಡಬಾರದು ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಆದರೆ, ಮುಖ್ಯಮಂತ್ರಿ ಮಾತ್ರ ಮೌನ ವಹಿಸಿದ್ದಾರೆ. ಈ ಎಲ್ಲದರ ಹಿಂದೆ ಸಿದ್ದರಾಮಯ್ಯ ಅವರ ಪಾತ್ರ ಇದೆ ಎಂದು ಆರೋಪಿಸಿದರು.

ಮುಖ್ಯಮಂತ್ರಿ ಬದಲಾವಣೆ ವಿಯಷದಲ್ಲಿ ಬಿಜೆಪಿಯವರ ಕೈವಾಡ ಇದೆ ಎಂಬ ಕಾಂಗ್ರೆಸ್ ಶಾಸಕರ ಆರೋಪ ಬಾಲಿಷತನದಿಂದ ಕೂಡಿದೆ. ಕಾಂಗ್ರೆಸ್ ತನ್ನ ಎಡೆಯಲ್ಲಿ ಕತ್ತೆ ಸತ್ತು ಬಿದ್ದರೆ ಬಿಜೆಪಿ ಮೇಲೆ ಗೂಬೆ ಕೂರಿಸುವುದು ಸರಿಯಲ್ಲ ಎಂದು ಕಿಡಿಕಾರಿದರು.

ಜನರು ಅವರಿಗೆ ಆಧಿಕಾರ ಕೊಟ್ಟಿದ್ದಾರೆ. ಆದರೆ ರಾಜ್ಯ ಸರ್ಕಾರ ಎಲ್ಲ ವಿಷಯಗಳಲ್ಲಿ ವಿಫಲವಾಗಿದೆ. ವಾಲ್ಮೀಕಿ‌ ನಿಗಮದ ಹಗರಣ, ಬಾಂಬ್ ಸ್ಫೋಟ, ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದು ಇದಕ್ಕೆ ಸಾಕ್ಷಿ ಎಂದರು.

ಕಾಂಗ್ರೆಸ್‌ಗೆ ಕಮಾಂಡೇ ಇಲ್ಲ: ಕಾಂಗ್ರೆಸ್ ಗೆ ಹೈಕಮಾಂಡ್ ಅಲ್ಲಾ... ಕಮಾಂಡೇ ಇಲ್ಲ. ಪಕ್ಷದಲ್ಲಿ ಅಶಿಸ್ತು ತುಂಬಿದೆ. ಸಚಿವರು, ಶಾಸಕರನ್ನು ನಿಯಂತ್ರಿಸಲು ವರಿಷ್ಠರಿಗೆ ಹಿಡಿತವೇ ಇಲ್ಲ ಎಂದು ಪ್ರಲ್ಹಾದ ಜೋಶಿ ವ್ಯಂಗ್ಯವಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT