ನವಲಗುಂದ: ಸ್ಥಳೀಯ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರ ನಿರ್ಲಕ್ಷ್ಯದಿಂದಾಗಿ ನವಜಾತ ಶಿಶುವೊಂದು ಮರಣ ಹೊಂದಿದೆ ಎಂದು ಪಾಲಕರು ಆರೋಪಿಸಿದ ಘಟನೆ ಶುಕ್ರವಾರ ನಡೆದಿದೆ.

ಬುಧವಾರ ಇಲ್ಲಿನ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದ ವಿಧಾನಸಭಾ ಕ್ಷೇತ್ರದ ತಾಲ್ಲೂಕಿನ ಕಿತ್ತೂರು ಗ್ರಾಮದ ಮಹಿಳೆ ಹೆರಿಗೆಗಾಗಿ ದಾಖಲು ಮಾಡಿಕೊಳ್ಳಲಾಗಿತ್ತು. ಸಿಜೇರಿಯನ್ ಮೂಲಕ ಹೆರಿಗೆ ಮಾಡಿಸಲಾಗಿತ್ತು. ಶಸ್ತ್ರಚಿಕಿತ್ಸೆಯ ನಂತರ ಮಗು ಮತ್ತು ತಾಯಿಯನ್ನು ವಾರ್ಡ್ಗೆ ಸ್ಥಳಾಂತರ ಮಾಡಲಾಗಿತ್ತು.

ವಾರ್ಡ್ನಲ್ಲಿ ಸ್ಥಳಾಂತರ ಮಾಡಿ ಮೂರು ದಿನವಾದರೂ ವೈದ್ಯಕೀಯ ಉಪಚಾರ ಮಾಡದೇ ನಿರ್ಲಕ್ಷ್ಯ ವಹಿಸಿದ್ದರಿಂದ ಶುಕ್ರವಾರ ರಾತ್ರಿ ಉಸಿರಾಟದ ತೊಂದರೆ ಕಾಣಿಸಿಕೊಂಡಿತು. ಈ ಕುರಿತು ವೈದ್ಯ ಸಿಬ್ಬಂದಿ ಗಮನಕ್ಕೆ ತಂದಾಗ ಸ್ಥಳೀಯ ಮಕ್ಕಳ ತಜ್ಞರ ಬಳಿ ನವಜಾತ ಶಿಶುವನ್ನು ಪರೀಕ್ಷೆಗೆ ಕಳುಹಿಸಿದಾಗ ಮಗು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ಈ ಕುರಿತು ಮೃತ ಪಾಲಕರು ಸರ್ಕಾರಿ ಆಸ್ಪತ್ರೆಯ ವೈದ್ಯರು ಮಗು ಹುಟ್ಟಿದ ದಿನದಿಂದ ಮೂರು ದಿನಗಳಾದರೂ ವೈದ್ಯಕೀಯ ಉಪಚಾರ ಮಾಡಲು ನಿರ್ಲಕ್ಷ ತೊರಿದ್ದರಿಂದ ತಮ್ಮ ಮಗು ಮರಣಹೊಂದಿದೆ ಎಂದು ಆರೋಪಿಸಿದ್ದಾರೆ.

ಇಲ್ಲಿನ ಸರ್ಕಾರಿ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿ ವಿರುದ್ಧ ಜನ ಹಿಡಿಶಾಪ ಹಾಕಿದರಲ್ಲದೆ ಮಹಿಳೆಯ ಸಂಬಂಧಿಕರು ರೋಧಿಸಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.