ಸಿದ್ದರಾಮಯ್ಯ ಕ್ಷಮೆಯಾಚಿಸಲು ಆಗ್ರಹ
‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಏಕವಚನ ಬಳಸಿ ಮಾತನಾಡಿದ್ದು ಖಂಡನೀಯ. ಕೂಡಲೇ ಅವರು ಕ್ಷಮೆಯಾಚಿಸಬೇಕು’ ಎಂದು ಆಗ್ರಹಿಸಿದರು. ‘ಸಿದ್ದರಾಮಯ್ಯ ಅವರು ಏಕವಚನ ಬಳಸಿ ಮಾತಾಡಿರುವ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. ಅವರು ಕ್ಷಮೆಯಾಚಿಸದಿದ್ದರೆ ಬಿಜೆಪಿ ಮಹಿಳಾ ಮೋರ್ಚಾ ಹೋರಾಟ ಹಮ್ಮಿಕೊಳ್ಳಲಾಗುತ್ತದೆ’ ಎಂದು ಹೇಳಿದರು.