ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಶ್ಚಿಮ ಶಿಕ್ಷಕರ ಕ್ಷೇತ್ರದ ಚುನಾವಣೆ: ಚಿಂತಕರ ಚಾವಡಿಯಿಂದ‌ ಸ್ಪರ್ಧೆ

Last Updated 9 ಮೇ 2022, 7:31 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಮುಂಬರು ವಿಧಾನ ಪರಿಷತ್ ಪಶ್ಚಿಮ‌ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಕ್ಷೇತ್ರದ ಶಾಲಾ-ಕಾಲೇಜುಗಳ ಶಿಕ್ಷಕರು ಮತ್ತು ಪ್ರಾಧ್ಯಾಪಕರನ್ನೊಳಗೊಂಡ ಚಿಂತಕರ ಚಾವಡಿಯಿಂದ‌ ಸ್ಪರ್ಧಿಸಲಿದ್ದಾರೆ ಎಂದು ಚಿಂತಕರ ಚಾವಡಿ ಸದಸ್ಯ ಎಲ್.ಎಸ್. ಅರಳಿಹಳ್ಳಿ ತಿಳಿಸಿದರು.

ಚಿಂತಕರ ಚಾವಡಿಯಲ್ಲಿ ೪ ಸಾವಿರ ಸದಸ್ಯರಿದ್ದಾರೆ. ಮುಂದಿನ ದಿನಗಳಲ್ಲಿ 15 ಸಾವಿರ ಸದಸ್ಯತ್ವ ಮಾಡಿಸುವ ಗುರಿ ಹೊಂದಲಾಗಿದೆ. ಆದರಿಂದ ಈ ಬಾರಿ ಚಾವಡಿಯಿಂದ ಅಭ್ಯರ್ಥಿಯನ್ನು ನಿಲ್ಲಿಸಲು ತೀರ್ಮಾನಿಸಲಾಗಿದೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಕಳೆದ ಬಾರಿ ಬಸವರಾಜ ಹೊರಟ್ಟಿ ಅವರು ಇದು ನನ್ನ ಕೊನೆಯ ಚುನಾವಣೆ ಎಂದು ಹೇಳಿ, ಎಲ್ಲ ಶಿಕ್ಷಕರ ಬೆಂಬಲ ಪಡೆದು ಚುನಾವಣೆಯಲ್ಲಿ ಜಯ ಗಳಿಸಿದ್ದರು. ಹಾಗಾಗಿ, ಈ ಬಾರಿ ಸ್ವತಃ ಅವರೇ ಬೇರೆ ಅಭ್ಯರ್ಥಿ ಆಯ್ಕೆ ಮಾಡಿ, ಚುನಾವಣೆ ನಿಲ್ಲಿಸಿ ಬೆಂಬಲ ನೀಡಬೇಕು ಎಂದು ಆಗ್ರಹಿಸಿದರು.

ಚಿಂತಕರ ಚಾವಡಿಯಲ್ಲಿ ಎಂಟು ಜನ ಆಕಾಂಕ್ಷಿ ಅಭ್ಯರ್ಥಿಗಳಿದ್ದಾರೆ. ಈ ಪೈಕಿ ಒಬ್ಬರನ್ನು ಆಯ್ಕೆ ಮಾಡಿ ಚುನಾವಣೆಯಲ್ಲಿ ಸ್ಪರ್ಧಿಸಲು ನಿಲ್ಲಿಸಲಾಗುತ್ತದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT