ಹುಬ್ಬಳ್ಳಿ: ‘ಚಿತ್ತಾಪುರದಲ್ಲಿ ನವೆಂಬರ್ 2 ರಂದು ಭೀಮ ಆರ್ಮಿ, ದಲಿತ ಸಂಘಟನೆಗಳು, ಹಿಂದುಳಿದ ವರ್ಗಗಳು ಸೇರಿ ಯಾರಾದರೂ ಮೆರವಣಿಗೆ ನಡೆಸಲಿ. ಅದಕ್ಕೆ ನಮ್ಮ ಅಭ್ಯಂತರವಿಲ್ಲ’ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಆರ್.ಅಶೋಕ ಹೇಳಿದರು.

‘ರಾಜ್ಯದಲ್ಲಿ ಆಡಳಿತ ಮತ್ತು ಕಾನೂನು ಸುವಸ್ಥೆ ಸಂಪೂರ್ಣ ಕುಸಿದಿದೆ. ಮುಖ್ಯಮಂತ್ರಿ ಅಧಿಕಾರದ ಹಸ್ತಾಂತರ ಪ್ರಕ್ರಿಯೆ ನಡೆಯುತ್ತಿರುವ ಕಾರಣ ಆರ್ಎಸ್ಎಸ್ ವಿಷಯವನ್ನು ಮುನ್ನಲೆಗೆ ತರಲಾಗಿದೆ’ ಎಂದು ಅವರು ಗುರುವಾರ ಸುದ್ದಿಗಾರರಿಗೆ ತಿಳಿಸಿದರು.

’ಆರ್ಎಸ್ಎಸ್ಗೆ ಎಲ್ಲಿಂದ ಹಣ ಬರುತ್ತದೆ ಎಂದು ಕೇಳಿರುವ ಪ್ರಿಯಾಂಕ್ ಖರ್ಗೆ ಅವರು, ಮೊದಲು ಕಾಂಗ್ರೆಸ್ಗೆ ಎಲ್ಲಿಂದ ಹಣ ಬರುತ್ತದೆ ಎಂಬುದನ್ನು ಬಹಿರಂಗಪಡಿಸಲಿ’ ಎಂದು ಸವಾಲು ಹಾಕಿದರು.

ವಿಧಾನ ಪರಿಷತ್ತು ಸದಸ್ಯ ಸಿ.ಟಿ.ರವಿ ಮಾತನಾಡಿ, ‘ಆರ್ಎಸ್ಎಸ್ ಕಾರ್ಯಕರ್ತರ ಕೈಯಲ್ಲಿ ಲಾಠಿ ಜನರಲ್ಲಿ ಶಿಸ್ತು, ಆತ್ಮವಿಶ್ವಾಸ ಮತ್ತು ದೇಶಪ್ರೇಮ ಮೂಡಿಸಲು ಇದೆಯೇ ಹೊರತು ಸಂಘರ್ಷಕ್ಕಲ್ಲ. ಲಾಠಿಯ ಬಗ್ಗೆ ನಮಗೆ ಹೆಮ್ಮೆಯಿದೆ. ಯಾರು ಬೇಕಾದರೂ ಆರ್ಎಸ್ಎಸ್ ಸಂಘಟನೆ ಸೇರಬಹುದು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.