ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತರ ಕರ್ನಾಟಕ ಭಾಗದ ‌ಸಮಸ್ಯೆಗಳ‌ ಚರ್ಚೆಗೆ ಆದ್ಯತೆ: ‌ಬೊಮ್ಮಾಯಿ

Last Updated 10 ಡಿಸೆಂಬರ್ 2021, 4:28 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳು ಹಾಗೂ ಅಭಿವೃದ್ಧಿ ‌ಕುರಿತು ಚರ್ಚೆಗೆ ಆದ್ಯತೆ‌ ನೀಡಲಾಗುವುದು ಎಂದು ಮುಖ್ಯಮಂತ್ರಿ ‌ಬಸವರಾಜ ಬೊಮ್ಮಾಯಿ ಹೇಳಿದರು.

ವಿಧಾನ ಪರಿಷತ್ ಚುನಾವಣೆಯಲ್ಲಿ ಮತ ಚಲಾಯಿಸಲು ಶಿಗ್ಗಾವಿಗೆ ತೆರಳುವ ಮೊದಲು ಶುಕ್ರವಾರ ಇಲ್ಲಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು ಈ ಭಾಗದ ನೀರಾವರಿ ಯೋಜನೆಗಳ ಬಗ್ಗೆ ಚರ್ಚೆ ಮಾಡಲಾಗುವುದು. ಮಹದಾಯಿ ವಿಚಾರ ಸದ್ಯಕ್ಕೆ ನ್ಯಾಯಾಲಯದಲ್ಲಿದ್ದು, ಯೋಜನೆ ತ್ವರಿತ ಜಾರಿಗೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಮಳೆಯಿಂದ ಆದ ಬೆಳೆ ಹಾನಿಗೆ ಪರಿಹಾರ ನೀಡುವ ಕೆಲಸ ಈಗಾಗಲೇ ಆರಂಭವಾಗಿದೆ. ಕ್ರಿಸ್ ಮಸ್ ಹಾಗೂ ಹೊಸ ವರ್ಷ ಅದ್ದೂರಿ ಆಚರಣೆಗೆ ನಿರ್ಬಂಧ ವಿಧಿಸುವ ಬಗ್ಗೆ ಸದ್ಯಕ್ಕೆ ತೀರ್ಮಾನ ಕೈಗೊಂಡಿಲ್ಲ ಎಂದರು.

ಪ್ರತಿಕೂಲ ಹವಾಮಾನದಿಂದಾಗಿ ವಿಮಾನ ಲ್ಯಾಂಡ್ ಆಗುವುದು ವಿಳಂಬವಾಯಿತು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT