ಹುಬ್ಬಳ್ಳಿ: ಸೋದರ ಸಂಬಂಧಿ ಹಾಗೂ ಆಪ್ತ ಸ್ನೇಹಿತ ರಾಜು ಪಾಟೀಲ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಣ್ಣೀರು ಹಾಕಿದರು.
ಬೆಳಿಗ್ಗೆ ಬೆಂಗಳೂರಿನಿಂದ ವಿಶೇಷ ವಿಮಾನದಲ್ಲಿ ಬಂದಿಳಿದ ಬೊಮ್ಮಾಯಿ, ಹುಬ್ಬಳ್ಳಿಯ ಮಂಜುನಾಥ ನಗರದಲ್ಲಿರುವ ಪಾಟೀಲ ಅವರ ನಿವಾಸಕ್ಕೆ ಭೇಟಿ ನೀಡಿದರು. ಸ್ನೇಹಿತನ ಪಾರ್ಥೀವ ಶರೀರಕ್ಕೆ ಹೂಮಾಲೆ ಹಾಕಿ ಅಂತಿಮ ದರ್ಶನ ಪಡೆದ ಅವರು, ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.
ರಾಜು ಅವರು ಬುಧವಾರ ಹೃದಯಾಘಾತದಿಂದಾಗಿ ನಿಧನರಾಗಿದ್ದರು.
ಆಮೇಲೆ ಮಾತನಾಡುವೆ: ಸ್ನೇಹಿತನ ಸಾವಿನ ದುಃಖದಲ್ಲಿದ್ದ ಬೊಮ್ಮಾಯಿ ಅವರು, ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಲು ನಿರಾಕರಿಸಿದರು. ‘ಎಲ್ಲಾ ಮುಗಿಸಿಕೊಂಡು ಆಮೇಲೆ ನಿಮ್ಮೊಂದಿಗೆ ಮಾತನಾಡುವೆ’ ಎಂದು ಸ್ನೇಹಿತನ ಮನೆಯತ್ತ ಹೊರಟರು.
ಜವಳಿ ಮತ್ತು ಸಕ್ಕರೆ ಸಚಿವ ಶಂಕರಪಾಟೀಲ ಮುನೇನಕೊಪ್ಪ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.