ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಿನ ಬಳಕೆ ವಸ್ತುಗಳ ಬೆಲೆ ಏರಿಕೆ, ಹಣಕಾಸು ಸಚಿವರ ಜೊತೆ ಚರ್ಚಿಸಲಾಗುವುದು: ಸಿಎಂ

Last Updated 2 ಸೆಪ್ಟೆಂಬರ್ 2021, 6:55 IST
ಅಕ್ಷರ ಗಾತ್ರ

ಹುಬ್ಬಳ್ಳಿ: 'ದಿನನಿತ್ಯ ಬಳಕೆ ವಸ್ತುಗಳ ಬೆಲೆ ಏರಿಕೆ ಕುರಿತು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಜೊತೆ ಚರ್ಚಿಸಲಾಗುವುದು' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಅಂತರರಾಷ್ಟ್ರೀಯ ಮಟ್ಟದಲ್ಲಿ ತೈಲ ಬೆಲೆ ಏರಿಕೆಯಾದ ಕಾರಣ ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್ ದರ ಏರಿಕೆಯಾಗಿದೆ. ಸೆ. 5 ರಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ರಾಜ್ಯಕ್ಕೆ ಬರಲಿದ್ದು, ಅವರೊಂದಿಗೆ ಚರ್ಚಿಸಲಾಗುವುದು' ಎಂದರು.

'ಕೊರೊನಾ ಸೋಂಕು ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ. ಕೇರಳ ಗಡಿಯಿಂದ ರಾಜ್ಯಕ್ಕೆ ಬರುವಾಗ ಕೆಲವರು ಸುಳ್ಳು ಕೋವಿಡ್ ನೆಗಟಿವ್ ವರದಿ ಪಡೆದು ಬರುತ್ತಿದ್ದಾರೆ ಎಂದು ತಿಳಿದುಬಂದಿದೆ. ಹೀಗಾಗಿ ಎಲ್ಲರನ್ನೂ ಪರೀಕ್ಷಿಸಿ ರಾಜ್ಯದ ಒಳಗೆ ಬಿಡಲಾಗುತ್ತಿದೆ. ನಿಯಮ ಮೀರಿದವರ ವಿರುದ್ಧ ಕ್ರಮ ಜರುಗಿಸಲಾಗುವುದು' ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT