ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಬ್ರಾಹಿಂ ಪಕ್ಷ ಬಿಡುವುದಿಲ್ಲವೆಂಬ ವಿಶ್ವಾಸವಿದೆ: ಸಲೀಂ ಅಹ್ಮದ್

Last Updated 12 ಮಾರ್ಚ್ 2022, 10:40 IST
ಅಕ್ಷರ ಗಾತ್ರ

ಧಾರವಾಡ: ‘ಎರಡು ಬಾರಿ ವಿಧಾನ ಪರಿಷತ್ ಸದಸ್ಯ, ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನವನ್ನು ಕಾಂಗ್ರೆಸ್‌ನಿಂದ ಪಡೆದಿರುವ ಸಿ.ಎಂ.ಇಬ್ರಾಹಿಂ ಅವರು ಪಕ್ಷವನ್ನು ಬಿಡುವುದಿಲ್ಲ ಎಂಬ ವಿಶ್ವಾಸವಿದೆ’ ಎಂದು ವಿಧಾನ ಪರಿಷತ್ ಸದಸ್ಯ ಸಲೀಂ ಅಹ್ಮದ್ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪ್ರತಿಪಕ್ಷ ನಾಯಕ ಎಸ್.ಆರ್.ಪಾಟೀಲ ಅವರನ್ನು ತೆಗೆದು ತನಗೆ ಆ ಸ್ಥಾನಮಾನ ನೀಡುವಂತೆ ಕೇಳಿದ್ದರು. ಪಕ್ಷ ಅದಕ್ಕೆ ಒಪ್ಪಲಿಲ್ಲ. ನಂತರ ಅವರು ಪಕ್ಷದ ಯಾವುದೇ ಚಟುವಟಿಕೆಗಳಲ್ಲೂ ಪಾಲ್ಗೊಳ್ಳಲಿಲ್ಲ. ಅವರ ಮನವೊಲಿಸುವ ಪ್ರಯತ್ನವನ್ನೂ ನಡೆಸಲಾಯಿತು. ಈಗಲೂ ಅವರು ಪಕ್ಷವನ್ನು ತೊರೆಯುವುದಿಲ್ಲ’ ಎಂದರು.

’ಸದನದಲ್ಲಿ ಆಡಳಿತ ಪಕ್ಷದ ವೈಫಲ್ಯಗಳ ಬಗ್ಗೆ ಮಾತನಾಡಬೇಕಿದ್ದ ಜೆಡಿಎಸ್ ಮುಖಂಡ ಎಚ್.ಡಿ.ಕುಮಾರಸ್ವಾಮಿ ಅವರು ವಿರೋಧ ಪಕ್ಷದ ನಾಯಕರ ಮೇಲೆ ಆಪಾದನೆ ಮಾಡುತ್ತಿರುವುದು ಹಾಸ್ಯಾಸ್ಪದ. ಕುಮಾರಸ್ವಾಮಿ ಅವರು ದಾಟಿ ನೋಡಿದರೆ ಬಿಜೆಪಿ ಮತ್ತು ಜೆಡಿಎಸ್ ನಡುವೆ ಮ್ಯಾಜ್ ಫಿಕ್ಸಿಂಗ್ ನಡೆದಿರುವ ಶಂಕೆ ವ್ಯಕ್ತವಾಗುತ್ತಿದೆ’ ಎಂದರು.

ಪಂಚರಾಜ್ಯ ಚುನಾವಣೆ ಬಳಿಕ ಕಾಂಗ್ರೆಸ್ ನಾಯಕತ್ವ ಬದಲಾವಣೆ ಕುರಿತು ಶಶಿ ತರೂರ್ ಮಾಡಿದ ಟ್ವೀಟ್ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಸಲೀಂ, ‘ಅಮೆರಿಕಾ ಅಥವಾ ಲಂಡನ್‌ನಲ್ಲಿ ಕೂತು ಮಾಡುವ ಟ್ವೀಟ್‌ಗಳಿಗೆ ಬೆಲೆ ಕೊಡಬೇಕಾಗಿಲ್ಲ. ಮುಂದೆಯೂ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ನೇತೃತ್ವದಲ್ಲೇ ಚುನಾವಣೆ ಎದುರಿಸಿ ಗೆಲುವು ಸಾಧಿಸಲಿದ್ದೇವೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT