ಹುಬ್ಬಳ್ಳಿ: ‘ಹಾಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಾಯಕತ್ವದಲ್ಲಿ ಚುನಾವಣೆ ಎದುರಿಸುತ್ತಿದ್ದೇವೆ. ಮುಂದಿನ ನಾಯಕತ್ವವನ್ನು (ಸಿ.ಎಂ) ಚುನಾವಣೆಯ ನಂತರ ತೀರ್ಮಾನಿಸುತ್ತೇವೆ’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.

ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬೊಮ್ಮಾಯಿ ನೇತೃತ್ವದಲ್ಲಿ ಚುನಾವಣೆ ನಡೆಯುತ್ತಿದ್ದು, ಮುಂದಿನ ಸಿ.ಎಂ ಪ್ರಶ್ನೆ ಉದ್ಭವಿಸಲ್ಲ. ಪಕ್ಷದವರೆ ಹಾಲಿ ಮುಖ್ಯಮಂತ್ರಿ ಇದ್ದಾಗ, ಬೇರೆ ಅಭ್ಯರ್ಥಿಗಳ ಹೆಸರು ಪ್ರಕಟಿಸಲ್ಲ. ಇದೊಂದು ಸಾಮಾನ್ಯವಾಗಿ ನಡೆದುಕೊಂಡು ಬಂದಂತಹ ಪ್ರಕ್ರಿಯೆ’ ಎಂದರು.

‘ಬೊಮ್ಮಾಯಿ ನೇತೃತ್ವದಲ್ಲಿ ಹಾಗೂ ಬಿ.ಎಸ್. ಯಡಿಯೂರಪ್ಪ ಮಾರ್ಗದರ್ಶನದಲ್ಲಿ ಬಿಜೆಪಿ ಚುನಾವಣೆ ಎದುರಿಸುತ್ತಿದೆ. ಅತಿ ಹೆಚ್ಚು ಲಿಂಗಾಯತರಿಗೆ ಟಿಕೆಟ್ ಕೊಟ್ಟಿದ್ದೇವೆ. ಪಕ್ಷದಲ್ಲಿ ಲಿಂಗಾಯತರಿಗೆ ಯಾವುದೇ ರೀತಿಯಲ್ಲಿ ಕಡೆಗಣನೆ ಮಾಡಿಲ್ಲ. ಲಿಂಗಾಯತರ ವಿಷಯ ಬಿಜೆಪಿಗೆ ಚುನಾವಣಾ ವಿಷಯವಲ್ಲ’ ಎಂದು ಹೇಳಿದರು.

‘ಲಿಂಗಾಯತ ಸಿಎಂ ಮಾಡಲ್ಲವೆಂದು ನಾವೆಲ್ಲೂ ಹೇಳಿಲ್ಲ. ಬೊಮ್ಮಾಯಿ ನೇತೃತ್ವದಲ್ಲಿ ಚುನಾವಣೆ ನಡೆಯುತ್ತಿದೆ. ಬೊಮ್ಮಾಯಿ ಅವರು ಅತ್ಯುತ್ತಮವಾಗಿ ಮುಂದಾಳತ್ವವನ್ನು ನಿಭಾಯಿಸುತ್ತಿದ್ದಾರೆ’ ಎಂದು ಪ್ರಶಂಸಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.