ಮಂಗಳವಾರ, ಆಗಸ್ಟ್ 20, 2019
25 °C

ಸಮ್ಮಿಶ್ರ ಸರ್ಕಾರದಲ್ಲಿ ದಲಿತ ಸಮುದಾಯದವರು ಸಿಎಂ ಆಗಲಿ: ಶ್ರೀರಾಮುಲು

Published:
Updated:

ಹುಬ್ಬಳ್ಳಿ: ಸಮ್ಮಿಶ್ರ ಸರ್ಕಾರದಲ್ಲಿ ದಲಿತ ಸಮುದಾಯದ ಮಲ್ಲಿಕಾರ್ಜುನ ಖರ್ಗೆ ಅಥವಾ ಪರಮೇಶ್ವರ ಅವರನ್ನು ಮುಖ್ಯಮಂತ್ರಿ ಮಾಡಲಿ ಎಂದು ಶಾಸಕ ಶ್ರೀರಾಮುಲು ಹೇಳಿದರು.

ಕುಂದಗೋಳ ತಾಲ್ಲೂಕಿನ ದೇವನೂರ ಗ್ರಾಮದಲ್ಲಿ ಗುರುವಾರ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸಿದ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.

ಎಲ್ಲ ಸಮುದಾಯದವರಿಗೂ ಅವಕಾಶ ನೀಡಲಾಗಿದೆ. ಈಗ ಉಳಿದಿರುವುದು ದಲಿತರು ಹಾಗೂ ವಾಲ್ಮೀಕಿ ಜನಾಂಗದವರು ಮಾತ್ರ. ಪರಮೇಶ್ವರ ಅವರು ಸಿ.ಎಂ ಸ್ಥಾನ ಸಿಗಲಿಲ್ಲ ಎಂದು ಕಣ್ಣೀರು ಹಾಕುತ್ತಿದ್ದರು. ಬೇಕಾದರೆ ಅವರನ್ನೇ ಸಿಎಂ ಮಾಡಲಿ ಎಂದರು.

ಬಿಜೆಪಿಯಲ್ಲಿ ಯಾರು ಸಿಎಂ ಅಗಬೇಕು, ಡಿಸಿಎಂ ಯಾರಾಗಬೇಕು ಎಂಬುದನ್ನು ಪಕ್ಷದ ವರಿಷ್ಠರು ನಿರ್ಧರಿಸುತ್ತಾರೆ ಎಂದು ಹೇಳಿದರು.

Post Comments (+)