ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಅನುಮತಿಗೆ ವಿಳಂಬ: CM ಪ್ರತಿಕೃತಿ ದಹನ

Published 15 ಸೆಪ್ಟೆಂಬರ್ 2023, 13:59 IST
Last Updated 15 ಸೆಪ್ಟೆಂಬರ್ 2023, 13:59 IST
ಅಕ್ಷರ ಗಾತ್ರ

ಹುಬ್ಬಳ್ಳಿ: ನಗರದ ರಾಣಿ ಚನ್ನಮ್ಮ ಮೈದಾನ(ಈದ್ಗಾ)ದಲ್ಲಿ ಗಣೇಶಮೂರ್ತಿ ಪ್ರತಿಷ್ಠಾಪಿಸಲು ಪಾಲಿಕೆ ಆಯುಕ್ತರು ಅನುಮತಿ ನೀಡಲು ವಿಳಂಬ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿ ಬಿಜೆಪಿ ಮತ್ತು ವಿವಿಧ ಹಿಂದೂ ಸಂಘಟನೆ ಕಾರ್ಯಕರ್ತರು ಮಹಾನಗರ ಪಾಲಿಕೆ ಎದುರು ರಸ್ತೆತಡೆ ನಡೆಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಕೃತಿ, ರಾಹುಲ್ ಗಾಂಧಿ ಅವರ ಭಾವಚಿತ್ರ ಹಾಗೂ ಟೈರ್ ಸುಟ್ಟು ಆಕ್ರೋಶ ವ್ಯಕ್ತಪಡಿಸಿ, ಕಾಂಗ್ರೆಸ್ ಸರ್ಕಾರ ಹಾಗೂ ಪಾಲಿಕೆ ಆಯುಕ್ತರ ವಿರುದ್ಧ ಘೋಷಣೆ ಕೂಗಿದರು.

ಸುಮಾರು ಅರ್ಧಗಂಟೆ ವಾಹನಗಳ ಸಂಚಾರ ತಡೆದ ಪರಿಣಾಮ, ಲ್ಯಾಮಿಂಗ್ಟನ್ ರಸ್ತೆ ಹಾಗೂ ಚನ್ನಮ್ಮ ವೃತ್ತದ ಸುತ್ತಲಿನ ರಸ್ತೆಗಳು ವಾಹನ ದಟ್ಟಣೆಯಿಂದ ಕೂಡಿದ್ದವು. ಪ್ರತಿಭಟನಾಕಾರರು ಪಾಲಿಕೆ ಆಯುಕ್ತರ ಕಚೇರಿಗೆ ತೆರಳಿ ಪ್ರತಿಭಟನೆ ಮುಂದುವರಿಸಿದ್ದಾರೆ.

ಪೊಲೀಸರು ಸಂಚಾರ ದಟ್ಟಣೆ ನಿಯಂತ್ರಿಸಿ, ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಶಾಸಕರಾದ ಅರವಿಂದ ಬೆಲ್ಲದ, ಮಹೇಶ ಟೆಂಗಿನಕಾಯಿ, ಪಾಲಿಕೆ ಸದಸ್ಯರಾದ ಶಿವು ಮೆಣಸಿನಕಾಯಿ, ರಾಜಣ್ಣ ಕೊರವಿ, ರಮೇಶ ಕೌಜಗೇರಿ, ಮೀನಾಕ್ಷಿ ವಂಟಮೂರಿ, ಬೀರಪ್ಪ ಖಂಡೆಕರ, ಸಂತೋಷ ಚವ್ಹಾಣ್, ಬಿಜೆಪಿ ಮುಖಂಡರಾದ ಶಿವಾನಂದ ಮುತ್ತಣ್ಣವರ, ರಂಗಾ ಬದ್ದಿ, ಅಶೋಕ ವಾಲ್ಮೀಕಿ, ರಾಜು ಕಾಳೆ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT