ಹುಬ್ಬಳ್ಳಿ: ‘ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕುರ್ಚಿ ಕಿತ್ತಾಟದಲ್ಲಿ ತೊಡಗಿದ್ದು, ಜನರು ಮತ್ತು ರಾಜ್ಯದ ಅಭಿವೃದ್ಧಿ ಮರೆತಿದ್ದಾರೆ’ ಎಂದು ಸಂಸದ ಬಸವರಾಜ ಬೊಮ್ಮಾಯಿ ದೂರಿದರು.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಈ ಸರ್ಕಾರ ತಂದಿರುವುದಕ್ಕಾಗಿ ಜನರು ಪಶ್ಚಾತ್ತಾಪ ಪಡುತ್ತಿದ್ದಾರೆ. ಸರ್ಕಾರ ಕಿತ್ತೊಗೆಯಲು ಕಾಯುತ್ತಿದ್ದಾರೆ’ ಎಂದರು.

‘ಪಡಿತರ ಆಹಾರ ವಿತರಣೆ ಮಾಡುವ ಲಾರಿಗಳಿಗೆ ₹250 ಕೋಟಿ ಬಾಕಿ ಉಳಿಸಿಕೊಳ್ಳಲಾಗಿದೆ. ರಾಜ್ಯ ಸರ್ಕಾರ ಹಣಕಾಸು ನಿರ್ವಹಣೆಯಲ್ಲಿ ಸಂಪೂರ್ಣ ವಿಫಲವಾಗಿದೆ. ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಸಾಕಷ್ಟು ಯೋಜನೆಗಳಿಗೆ ಹಣ ಕೊಟ್ಟಿದ್ದೇವೆ. ಇವರು ಸುಳ್ಳು ಹೇಳಿ ಕಾಲ ಕಳೆಯುತ್ತಿದ್ದಾರೆ’ ಎಂದು ಹೇಳಿದರು.

‘ಆರೋಗ್ಯ ವ್ಯವಸ್ಥೆ ಸರಿ ಇಲ್ಲ. ಶಿಕ್ಷಣ ವ್ಯವಸ್ಥೆ ಹದಗೆಟ್ಟಿದ್ದು, ನಿರೀಕ್ಷಿತ ಮಟ್ಟದಲ್ಲಿ ಎಸ್ಎಸ್ಎಲ್ಸಿ ಫಲಿತಾಂಶ ಬರುತ್ತಿಲ್ಲ. ರಸ್ತೆ, ಕುಡಿಯುವ ನೀರಿನ ಕಾಮಗಾರಿಗೂ ಹಣ ಬಿಡುಗಡೆಯಾಗುತ್ತಿಲ್ಲ. ಮಹಾನಗರ ಪಾಲಿಕೆಗಳ ಸಿಬ್ಬಂದಿ ಸಹ ವೇತನಕ್ಕಾಗಿ ಪ್ರತಿಭಟನೆ ಮಾಡುತ್ತಿದ್ದಾರೆ. ಮುಖ್ಯಮಂತ್ರಿ ತಕ್ಷಣ ಹಣ ಬಿಡುಗಡೆ ಮಾಡಬೇಕು' ಎಂದು ಆಗ್ರಹಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.