ಶನಿವಾರ, ನವೆಂಬರ್ 28, 2020
19 °C

ಅನಾರೋಗ್ಯ: ಬೆಂಗಳೂರಿಗೆ ಲಾಬೂರಾಮ್ ಏರ್‌ಲಿಫ್ಟ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಲಾಬೂರಾಮ್

ಹುಬ್ಬಳ್ಳಿ: ಅನಾರೋಗ್ಯದಿಂದಾಗಿ ಧಾರವಾಡದ ಎಸ್‌ಡಿಎಂ ಆಸ್ಪತ್ರೆಗೆ ದಾಖಲಾಗಿದ್ದ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ಲಾಬೂರಾಮ್ ಅವರನ್ನು, ಬುಧವಾರ ತಡರಾತ್ರಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಏರ್‌ಲಿಫ್ಟ್ ಮಾಡಲಾಗಿದೆ.

‘ಲಾಬೂರಾಮ್ ಅವರಿಗೆ ಜ್ವರ ಹಾಗೂ ಗಂಟಲಿನಲ್ಲಿ ಸೋಂಕು ಆಗಿ ಬಾವು ಕಾಣಿಸಿಕೊಂಡಿತ್ತು. ಇದಕ್ಕಾಗಿ, ಸಣ್ಣ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಕುಟುಂಬದವರು ಬೆಂಗಳೂರಿನಲ್ಲಿ ತಮಗೆ ಗೊತ್ತಿರುವ ವೈದ್ಯರ ಬಳಿಯೇ ಮುಂದಿನ ಚಿಕಿತ್ಸೆ ಪಡೆಯುವುದಾಗಿ ಹೇಳಿ, ಮಣಿಪಾಲ್ ಆಸ್ಪತ್ರೆಗೆ ಕರೆದೊಯ್ದರು’ ಎಂದು ಧಾರವಾಡದ ಎಸ್‌ಡಿಎಂ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಕಿರಣ್ ಹೆಗಡೆ ಹೇಳಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು