ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಳಿನ್‌ ಕುಮಾರ್‌ ಕಟೀಲ್‌ ವಿರುದ್ಧ ಹಳೇ ಹುಬ್ಬಳ್ಳಿ ಪೊಲೀಸ್‌ ಠಾಣೆಯಲ್ಲಿ ದೂರು

ಹಳೇ ಹುಬ್ಬಳ್ಳಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿರುವ ಕೆಪಿಸಿಸಿ ಮಾಧ್ಯಮ ವಿಶ್ಲೇಷಕ ವೇದವ್ಯಾಸ ಕೌಲಗಿ
Last Updated 27 ಏಪ್ರಿಲ್ 2022, 16:02 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಹಳೇಹುಬ್ಬ‌ಳ್ಳಿಯಲ್ಲಿ ನಡೆದ ಗಲಭೆಗೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರೇ ಪ್ರೇರಣೆ ನೀಡಿದ್ದಾರೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ಕುಮಾರ್‌ ಕಟೀಲ್‌ ಆರೋಪಿಸಿದ್ದು, ಅವರಿಂದ ವಾರದೊಳಗೆ ದಾಖಲೆ ಪಡೆಯಬೇಕು. ಇ‌ಲ್ಲದಿದ್ದರೆ ಅವರ ವಿರುದ್ಧ ಎಫ್‌ಐಆರ್ ದಾಖಲಿಸಬೇಕು ಎಂದು ಒತ್ತಾಯಿಸಿ ಕೆಪಿಸಿಸಿ ಮಾಧ್ಯಮ ವಿಶ್ಲೇಷಕ ವೇದವ್ಯಾಸ ಕೌಲಗಿ ಅವರು ಹಳೇ ಹುಬ್ಬಳ್ಳಿ ಪೊಲೀಸ್‌ ಠಾಣೆಯಲ್ಲಿ ಬುಧವಾರ ದೂರು ನೀಡಿದ್ದಾರೆ.

ನಳಿನ್ ಕುಮಾರ್‌ ಅವರು ಆಧಾರರಹಿತವಾಗಿ ಸಿದ್ದರಾಮಯ್ಯ ವಿರುದ್ಧ ಆರೋಪ ಮಾಡಿದ್ದು, ಅವರ ಹೇಳಿಕೆಯಿಂದ ಸಾರ್ವಜನಿಕರಲ್ಲಿ ತಪ್ಪು ಅಭಿಪ್ರಾಯ ಮೂಡಲಿದೆ. ಹೀಗಾಗಿ, ಅವರಿಗೆ ನೋಟಿಸ್‌ ಜಾರಿ ಮಾಡಬೇಕು. ಒಂದೊಮ್ಮೆ ಸಮರ್ಪಕ ಮಾಹಿತಿ ನೀಡದಿದ್ದರೆ, ಎಫ್‌ಐಆರ್‌ ದಾಖಲಿಸಬೇಕು ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT