ಹುಬ್ಬಳ್ಳಿ: ‘ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷ ಬೇರೆ ಆಗಿದ್ದರೂ, ಸೈದ್ಧಾಂತಿಕ ನಿಲುವು ಒಂದೇ ಆಗಿದೆ. ಪ್ರಸ್ತುತ ಲೋಕಸಭಾ ಚುನಾವಣೆಯನ್ನು ಎರಡೂ ಪಕ್ಷಗಳು ಒಂದಾಗಿ ಎದುರಿಸಲು ಸಿದ್ಧವಾಗಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು.

ಇಲ್ಲಿನ ಗೋಕುಲ ರಸ್ತೆಯ ಜೆ.ಪಿ. ನಗರದಲ್ಲಿರುವ ಆಮ್ ಆದ್ಮಿ ಪಕ್ಷದ ಕಚೇರಿಯಲ್ಲಿ ಭಾನುವಾರ ಹಮ್ಮಿ
ಕೊಂಡಿದ್ದ ಬಿ.ಆರ್.ಅಂಬೇಡ್ಕರ್ ಜಯಂತಿ ಮತ್ತು ಇಂಡಿಯಾ ಒಕ್ಕೂಟದ
ಸೆಂಟ್ರಲ್ ಕ್ಷೇತ್ರದ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದರು.

‘ಎರಡೂ ಪಕ್ಷಗಳು ಸೈದ್ಧಾಂತಿಕವಾಗಿ ಅಭಿವೃದ್ಧಿಪರ ವಿಚಾರಧಾರೆ ಹೊಂದಿವೆ. ಪ್ರಸ್ತುತ ಭಾರತದಲ್ಲಿ ಬಿಜೆಪಿಯಿಂದ ಸಂವಿಧಾನ, ಪ್ರಜಾಪ್ರಭುತ್ವ ಕಗ್ಗೊಲೆಯಾ ಗುತ್ತಿದೆ. ಪ್ರತಿಯೊಬ್ಬರಿಗೂ ಇದರ ಅರಿವು ಆಗುತ್ತಿದೆ. ಬಿಜೆಪಿಯ ಭದ್ರಕೋಟೆಯಾದ ಧಾರವಾಡ ಜಿಲ್ಲೆಯನ್ನು ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಭೇದಿಸಲಿದ್ದಾರೆ’ ಎಂದರು.

‘ಧಾರವಾಡ ಲೋಕಸಭಾ ಕ್ಷೇತ್ರದ ಜನರಿಗೆ 20 ವರ್ಷಗಳಿಂದ ಬಿಜೆಪಿ ಅನ್ಯಾಯ ಮಾಡುತ್ತ ಬಂದಿದೆ. ಅಭಿವೃದ್ಧಿ ಪರ ಧ್ವನಿ ಎತ್ತದೆ, ಮತದಾರರಿಗೆ ದ್ರೋಹ ಮಾಡುತ್ತಲೇ ಬಂದಿದೆ. ಜನರು ಬದಲಾವಣೆ ನಿರೀಕ್ಷಿಸುತ್ತಿದ್ದು, ಕಾಂಗ್ರೆಸ್ ಅಭ್ಯರ್ಥಿ ವಿನೋದ ಅಸೂಟಿಗೆ ಬೆಂಬಲ ನೀಡಲು ಮುಂದಾಗಿದ್ದಾರೆ’ ಎಂದರು.

ಹು–ಧಾ ಮಹಾನಗರ ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷ ಅಲ್ತಾಫ್ ಹಳ್ಳೂರ, ಜಿಲ್ಲಾ ಕಾಂಗ್ರೆಸ್ ಗ್ರಾಮೀಣ ಘಟಕದ ಅಧ್ಯಕ್ಷ ಅನಿಲಕುಮಾರ ಪಾಟೀಲ್, ಆಮ್ ಆದ್ಮಿ ಪಕ್ಷದ ರಾಜ್ಯ ಘಟಕದ ಕಾರ್ಯದರ್ಶಿ ಅನಂತಕುಮಾರ್ ಬುಗಡಿ, ಜಿಲ್ಲಾ ಘಟಕದ ಅಧ್ಯಕ್ಷ ಪ್ರವೀಣಕುಮಾರ ನಡಕಟ್ಟಿನ, ಲಕ್ಷಣ ನರಸಾಪುರ, ಪ್ರತಿಭಾ ದಿವಾಕರ, ಬಸವರಾಜ ತೇರದಾಳ, ಎಸ್.ಪಿ. ಹುಬ್ಳೀಕರ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.