ಹುಬ್ಬಳ್ಳಿ: ‘ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ರಾಜ್ಯದ ಮೂರು ಸಾವಿರ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದರು. ಅವರದ್ದೇ ಕೊಲೆಗಡುಕ ಸರ್ಕಾರವಾಗಿತ್ತು’ ಎಂದು ಬಿಜೆಪಿಯ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿರಗೇಟು ನೀಡಿದರು.

‘ಬಿಜೆಪಿಯದ್ದು ಕೊಲೆಗಡುಕ ಮನಸ್ಥಿತಿ’ ಎಂದು ಸಿದ್ದರಾಮಯ್ಯ ಅವರು ಮಾಡಿರುವ ಟ್ವೀಟ್ಗೆ ಸೋಮವಾರ ನಗರದಲ್ಲಿ ಪ್ರತಿಕ್ರಿಯಿಸಿದ ಅವರು, ‘ಒಂದು ಕಾಲಘಟ್ಟದಲ್ಲಿ ದೆಹಲಿಯಲ್ಲಿ ಕಾಂಗ್ರೆಸ್ ಆಡಳಿತ ಇತ್ತು. ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಗೆಗೆ ಒತ್ತಾಯಿಸಿ ಸಾಧು–ಸಂತರ ದೊಡ್ಡ ಪ್ರತಿಭಟನೆ ನಡೆದಿತ್ತು. ಆಗ ನಾಲ್ಕು ಸಾಧುಗಳಿಗೆ ಗುಂಡು ಹೊಡೆದು ಕೊಲ್ಲಲಾಯಿತು. ಸಿದ್ದರಾಮಯ್ಯರಿಗೆ ಅದು ನೆನಪಿರಲಿಲ್ಲವೇ?’ ಎಂದು ಪ್ರಶ್ನಿಸಿದರು.

ಸಿಂದಗಿ, ಹಾನಗಲ್ ಉಪಚುನಾವಣೆ ಕುರಿತು ಪ್ರತಿಕ್ರಿಯಿಸಿದ ನಳಿನ್, ‘ನಮ್ಮಲ್ಲಿ ಯಾವುದೇ ಕಿತ್ತಾಟ, ಗೊಂದಲಗಳಿಲ್ಲ. ಎಲ್ಲರೂ ಒಗ್ಗಟ್ಟಾಗಿದ್ದೇವೆ. ಈಗಾಗಲೇ ಚುನಾವಣಾ ಉಸ್ತುವಾರಿಗಳ ಒಂದು ಪಟ್ಟಿ ಬಿಡುಗಡೆ ಮಾಡಲಾಗಿದೆ. ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಮುಖಂಡರನ್ನು ಒಳಗೊಂಡಿರುವ ಮತ್ತೊಂದು ಪಟ್ಟಿಯನ್ನು ಎರಡು, ಮೂರು ದಿನಗಳಲ್ಲಿ ಬಿಡುಗಡೆ ಮಾಡಲಾಗುವುದು’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.