ಮಂಗಳವಾರ, 28 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಧಾರವಾಡ ಸಂಸದರಾಗಲಿದ್ದಾರೆ ಅಸೂಟಿ: ದೇವೇಂದ್ರಗೌಡ

Published 3 ಮೇ 2024, 15:45 IST
Last Updated 3 ಮೇ 2024, 15:45 IST
ಅಕ್ಷರ ಗಾತ್ರ

ಕುಂದಗೋಳ: ‘ಈ ಬಾರಿ ಕ್ಷೇತ್ರದ ಜನತೆ ಬದಲಾವಣೆ ಬಯಸಿದ್ದಾರೆ. ಕುಂದಗೋಳ ಮತಕ್ಷೇತ್ರ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಉತ್ತಮ ಸ್ಪಂದನೆ ಸಿಗುತ್ತಿದೆ’ ಎಂದು ಹುಬ್ಬಳ್ಳಿ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ದೇವೇಂದ್ರಗೌಡ ಧರ್ಮಗೌಡ್ರ ಹೇಳಿದರು.

ಕುಂದಗೋಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವರೂರ ಗ್ರಾಮದಲ್ಲಿ ಧಾರವಾಡ ಲೋಕಸಭಾ ಮತಕ್ಷೇತ್ರದ ಅಭ್ಯರ್ಥಿ ವಿನೋದ ಅಸೂಟಿ ಪರ ಗುರುವಾರ ಮತಯಾಚಿಸಿದ ಅವರು, ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಕಾರ್ಡ್‍ಗಳನ್ನು ವಿತರಿಸಿ ಮಾತನಾಡಿದರು.

‘ನಮ್ಮ ಸರ್ಕಾರ ನೀಡಿದ ಗ್ಯಾರಂಟಿ ಅರ್ಹರಿಗೆ ತಲುಪಿವೆ. ಈ ಬಾರಿ ವಿನೋದ ಅಸೂಟಿ ಧಾರವಾಡ ಸಂಸದ ಆಗಲಿದ್ದಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಷಣ್ಮುಖ ಶಿವಳ್ಳಿ ಹಾಗೂ ವರೂರ ಗ್ರಾಮ ಪಂಚಾಯ್ತಿ ಸದಸ್ಯ ಕರೆಪ್ಪ ಅಣ್ಣಿಗೇರಿ ನೇತೃತ್ವದಲ್ಲಿ ಜೆಡಿಎಸ್‌ನ 25 ಪ್ರಮುಖರು ಕಾಂಗ್ರೆಸ್ ಸೇರ್ಪಡೆಗೊಂಡರು.

ಛಬ್ಬಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ ಮುಳ್ಳಪ್ಪನವರ, ಯುವ ಕಾಂಗ್ರೆಸ್ ಉಪಾಧ್ಯಕ್ಷ ಪಕ್ರುಸಾಬ್ ಹೊಸಮನಿ, ಸಂಜೀವ ಬಂಡಿವಡ್ಡರ, ಆನಂದ ಪೂಜಾರ, ರಾಜು ಮ್ಯಾಗಿಡಿ, ಸಿದ್ದಾರ್ಥ ಮಲ್ಲಮ್ಮನವರ, ಕೃಷ್ಣೇಗೌಡ ಹನುಮಗೌಡ್ರ, ರಾಮಣ್ಣ ಸೊಟ್ಟಣ್ಣವರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT