ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿವಕುಮಾರ್ ಬಿಡುಗಡೆಗೆ ಕಾಂಗ್ರೆಸ್ ಆಗ್ರಹ

Last Updated 10 ಜುಲೈ 2019, 14:01 IST
ಅಕ್ಷರ ಗಾತ್ರ

ಧಾರವಾಡ: ‘ಮುಂಬೈನ ಹೋಟೆಲ್‌ನಲ್ಲಿ ಕರ್ನಾಟಕದ ಶಾಸಕರನ್ನು ಬಚ್ಚಿಟ್ಟಿರುವುದು ಮತ್ತು ಇವರನ್ನು ಮಾತನಾಡಿಸಲು ಹೋದ ರಾಜ್ಯದ ಶಾಸಕ ಡಿ.ಕೆ.ಶಿವಕುಮಾರ್ ಅವರನ್ನು ಬಂಧಿಸಿರುವ ಕ್ರಮ ಖಂಡನೀಯ. ಈ ಕೂಡಲೇ ಇವರನ್ನು ಬಿಡುಗಡೆಗೊಳಿಸಲು ಆದೇಶಿಸಬೇಕು’ ಎಂದು ಆಗ್ರಹಿಸಿ ಹುಬ್ಬಳ್ಳಿ ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ರಾಷ್ಟ್ರಪತಿಗೆ ಬುಧವಾರ ಮನವಿ ಸಲ್ಲಿಸಲಾಯಿತು.

ಡಿ.ಕೆ.ಶಿವಕುಮಾರ್ ಅವರು ಕಾನೂಬು ಬದ್ಧವಾಗಿ ಮುಂಬೈನ ಹೋಟೆಲ್‌ನಲ್ಲಿ ಕೊಠಡಿ ಕಾಯ್ದಿರಿಸಿದ್ದರು. ಆದರೆ ಆ ಹೋಟೆಲಿನೊಳಗೆ ಶಿವಕುಮಾರ್ ಅವರಿಗೆ ಪೊಲೀಸರು ಪ್ರವೇಶಿ ನಿರಾಕರಿಸಿದ್ದಾರೆ. ಮಹಾರಾಷ್ಟ್ರದ ಬಿಜೆಪಿ ಸರ್ಕಾರದ ಕೈಗೊಂಬೆಗಳಾಗಿರುವ ಪೊಲೀಸರು ನೆಲದ ಕಾನೂನಿಗೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಅಣತಿಯಂತೆ ಪೊಲೀಸರು ನಡೆದುಕೊಳ್ಳುತ್ತಿದ್ದಾರೆ ಎಂದು ರಾಬರ್ಟ್‌ ದದ್ದಾಪುರಿ ಆರೋಪಿಸಿದರು.

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಶಾಸಕರು ವಾಸ್ತವ್ಯ ಹೂಡಿರುವಹೋಟೆಲ್ ಹೊರಗೆ ಬಿಜೆಪಿ ಕಾರ್ಯಕರ್ತರು ‘ಗೋ ಬ್ಯಾಕ್ ಶಿವಕುಮಾರ್’ ಎಂದು ಕೂಗಿರುವುದನ್ನು ಗಮನಿಸಿದರೆ, ಸರ್ಕಾರ ಅಸ್ಥಿರಗೊಳಿಸುವುದರಲ್ಲಿ ಬಿಜೆಪಿ ಪಿತೂರಿ ಸ್ಪಷ್ಟವಾಗಿದೆ. ಪ್ರಜಾಪ್ರಭುತ್ವದ ನಿಯಮಗಳಿಗೆ ಅನುಗುಣವಾಗಿ, ಒಬ್ಬ ಸಹೋದರನಾಗಿ ಶಿವಕುಮಾರ್ ಅವರು ಪ್ರಜಾಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಲು ಮುಂಬೈಗೆ ತೆರಳಿ ಶಾಸಕರನ್ನು ಮಾತನಾಡಿಸಲು ಪ್ರಯತ್ನಿಸಿದ್ದಾರೆ. ಆದರೆ ಇದಕ್ಕೆ ಅವಕಾಶ ನೀಡದ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಪ್ರಜಾ ವಿರೋಧಿ ನೀತಿಗೆ ಹಿಡಿದ ಕನ್ನಡಿಯಾಗಿದೆ. ಇದು ಬಿಜೆಪಿಯ ಸಂವಿಧಾನ ವಿರೋಧಿ ನಡೆಯಾಗಿದೆ’ ಎಂದು ಆರೋಪಿಸಿದರು.

‘ಹೀಗಾಗಿ ಈ ಕೂಡಲೇ ರಾಷ್ಟ್ರಪತಿ ಮಧ್ಯಪ್ರವೇಶಿಸಿ ಬಂಧನದಲ್ಲಿರುವ ಡಿ.ಕೆ.ಶಿವಕುಮಾರ್ ಹಾಗೂ ಸಂಗಡಿಗರನ್ನು ಬಿಡುಗಡೆ ಮಾಡಿಸಬೇಕು. ಇಲ್ಲವಾದಲ್ಲಿ ಪ್ರಜಾಪ್ರಭುತ್ವ ನಡೆ ವಿರೋಧಿಸಿ ದೇಶದಾದ್ಯಂತ ಕಾಂಗ್ರೆಸ್‌ ಹೋರಾಟ ನಡೆಸಲಿದೆ. ಇದಕ್ಕೆ ಅವಕಾಶ ನೀಡದೆ ಸಂವಿಧಾನದ ಕಗ್ಗೊಲೆಯನ್ನು ತಡೆಯಲು ರಾಷ್ಟ್ರಪತಿ ಮಧ್ಯಪ್ರವೇಶಿಸಬೇಕು’ ಎಂದು ದದ್ದಾಪುರಿ ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT