ಶನಿವಾರ, ಮೇ 28, 2022
21 °C

‘ಗ್ರಾಮ ಸ್ವರಾಜ್ಯಕ್ಕೆ ಕಾಂಗ್ರೆಸ್‌ ಒತ್ತು’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ‘ಗ್ರಾಮೀಣ ಭಾಗದ ಸರ್ವತೋಮುಖ ಅಭಿವೃದ್ಧಿಗೆ ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸಿರುವ ಕಾಂಗ್ರೆಸ್ ಅಭ್ಯರ್ಥಿ ಸಲೀಂ ಅಹ್ಮದ್ ಅವರನ್ನು ಮತದಾರರು ಬೆಂಬಲಿಸಬೇಕು’ ಎಂದು ಧಾರವಾಡ ಜಿಲ್ಲಾ ಕಾಂಗ್ರೆಸ್ ಘಟಕದ ಮಾಧ್ಯಮ ವಕ್ತಾರ ಪಿ.ಎಚ್. ನೀರಲಕೇರಿ ಮನವಿ ಮಾಡಿದರು.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರಾಜೀವ್ ಗಾಂಧಿ ಅವರು ಗ್ರಾಮೀಣ ಅಭಿವೃದ್ಧಿ ದೃಷ್ಟಿಯಿಂದ ಗ್ರಾಮ ಸ್ವರಾಜ್ಯಕ್ಕೆ ಒತ್ತು ನೀಡಿದ್ದರು. ಪ್ರಧಾನಿಯಾಗಿದ್ದ ಪಿ.ವಿ. ನರಸಿಂಹರಾವ್ ಅವರು ಸಂವಿಧಾನದ 73 ಮತ್ತು 74ನೇ ಕಲಂ ತಿದ್ದುಪಡಿ ಮಾಡಿ ಗ್ರಾಮ, ತಾಲ್ಲೂಕು ಹಾಗೂ ಜಿಲ್ಲಾ ಪಂಚಾಯಿತಿಯಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡಿದರು. ಮಹಾತ್ಮ ಗಾಂಧೀಜಿ ಅವರ ಗ್ರಾಮ ಸ್ವರಾಜ್ಯದ ಕನಸನ್ನು ಸಾಕಾರಗೊಳಿಸಿದ್ದು ಸಹ ಕಾಂಗ್ರೆಸ್’ ಎಂದರು.

ಮುಖಂಡರಾದ ಅಲ್ತಾಫ್ ಹಳ್ಳೂರು, ಸತೀಶ ಮೆಹರವಾಡೆ, ಸದಾನಂದ ಡಂಗನವರ, ಅನಿಲ ಸಾವಂತ್, ಪರವೇಜ್ ಕೊನ್ನೂರು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು