ಸೋಮವಾರ, ಅಕ್ಟೋಬರ್ 26, 2020
23 °C

ಹುಬ್ಬಳ್ಳಿ: ಗಾಂಧಿ ಪ್ರತಿಮೆ ನಿರ್ಲಕ್ಷ್ಯಕ್ಕೆ ಕಾಂಗ್ರೆಸ್ ಖಂಡನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ಹುಬ್ಬಳ್ಳಿಯ ಕಿಮ್ಸ್ ಪ್ರವೇಶ ದ್ವಾರದ ಬಳಿ ಇರುವ ಗಾಂಧೀಜಿ ಪ್ರತಿಮೆಯ ನಿರ್ವಹಣೆಯ ಬಗ್ಗೆ ಮಹಾನಗರ ಪಾಲಿಕೆ ನಿರ್ಲಕ್ಷ್ಯ ತೋರಿದೆ ಎಂದು ಆರೋಸಿ, ಹುಬ್ಬಳ್ಳಿ– ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್ ವತಿಯಿಂದ ಕಿಮ್ಸ್ ಬಳಿ ಸಾಂಕೇತಿಕ ಧರಣಿ ನಡೆಯಿತು.

ಉಣಕಲ್ ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗೂ ವಿದ್ಯಾನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಹಮ್ಮಿಕೊಂಡಿರುವ ಧರಣಿಯಲ್ಲಿ ಪಕ್ಷದ ಮಹಾನಗರ ಘಟಕದ ಅಧ್ಯಕ್ಷ ಅಲ್ತಾಫ ಹಳ್ಳೂರ, ಮುಖಂಡರಾದ ನವೀದ್ ಮುಲ್ಲಾ, ಅಬ್ದುಲ್ ಗನಿ ವಲಿಅಹ್ಮದ, ಸಾಗರ ಹಿರೇಮನಿ, ಗೌರಿ ನಾಗರಾಜ ಮುಂತಾದವರು ಭಾಗವಹಿಸಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು