ಮಂಗಳವಾರ, ಡಿಸೆಂಬರ್ 7, 2021
19 °C

ಕೋವಿಡ್‌ನಿಂದ 52 ಲಕ್ಷ ಜನ ಮೃತಪಟ್ಟಿದ್ದರೂ ಬಿಜೆಪಿ ಸಂಭ್ರಮ: ಸಿದ್ದರಾಮಯ್ಯ ಟೀಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ಔಷಧ, ಬೆಡ್ ನೀಡದ ಕಾರಣ ಕೋವಿಡ್‌ನಿಂದ ದೇಶದಲ್ಲಿ 52 ಲಕ್ಷ ಹಾಗೂ ರಾಜ್ಯದಲ್ಲಿ 5 ಲಕ್ಷ‌ ಜನ ಮೃತರಾಗಿದ್ದಾರೆ. ಆದರೂ, ಬಿಜೆಪಿ‌ ಅವರು 100 ಕೋಟಿ ಲಸಿಕೆ ನೀಡಲಾಗಿದೆ ಎಂದು ಸಂಭ್ರಮಿಸುತ್ತಿದ್ದಾರೆ ಎಂದು ವಿಧಾನಸಭೆ ವಿರೋಧ ಪಕ್ಷದ‌ ನಾಯಕ ಸಿದ್ದರಾಮಯ್ಯ ಟೀಕಿಸಿದರು.

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇವಲ 29 ಕೋಟಿ ಜನರಿಗೆ ಎರಡು ಡೋಸ್ ಲಸಿಕೆ ನೀಡಲಾಗಿದೆ ಎಂದರು.

ಹಾನಗಲ್‌ನಲ್ಲಿ ಮತದಾರರು ಕಾಂಗ್ರೆಸ್ ಪರ ಒಲವು ತೋರುತ್ತಿದ್ದಾರೆ. ಬಿಜೆಪಿಯವರು ಅಭಿವೃದ್ಧಿ ಮೇಲೆ ಮತ ನೀಡಿ ಅಂತಿದ್ದಾರೆ. ಅವರು ಮಾಡಿದ ಅಭಿವೃದ್ದಿಯ ಪಟ್ಟಿ ಮಾಡಿ ಹೇಳಲಿ ಎಂದು ಸವಾಲು ಹಾಕಿದರು.

ಹಣ ಖರ್ಚು ಮಾಡಿ ಚುನಾವಣೆ ಗೆಲ್ಲಲು ಹೊರಟಿದ್ದಾರೆ. ನಾನು ಸಿಎಂ ಆದ ಮೇಲೆ  ಹಾನಗಲ್‌ಗೆ ₹ 2,400 ಕೋಟಿ ಕೊಟ್ಟಿದ್ದೇನೆ. ಸಿಎಂ ಬೊಮ್ಮಾಯಿ ಸುಳ್ಳು ಹೇಳಿ ಪ್ರಚಾರ ಮಾಡುತ್ತಿದ್ದಾರೆ. ಹಣ ಹಂಚಿಕೆ ಬಗ್ಗೆ ಚುನಾವಣಾ‌ ಆಯೋಗಕ್ಕೆ ದೂರು ನೀಡಲಾಗುವುದು ಎಂದರು.

ಕಾಂಗ್ರೆಸ್‌ಗೆ ಜಾತಿ ರಾಜಕಾರಣ ಮಾಡಿ ಗೊತ್ತಿಲ್ಲ. ಅವರ ಬಳಿ ಮುಸ್ಲಿಂ ಮಂತ್ರಿ ಇದ್ದಾರಾ? ಅವರನ್ನ ಯಾಕೆ ಸಚಿವರನ್ನಾಗಿ ಮಾಡಲಿಲ್ಲ ಎಂದು ಪ್ರಶ್ನಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು