ಹುಬ್ಬಳ್ಳಿ: ‘ಮೇಕೆದಾಟು ಯೋಜನೆ ಅನುಷ್ಠಾನ ಮಾಡುವಂತೆ ಆಗ್ರಹಿಸಿ ಕಾಂಗ್ರೆಸ್ ಪಾದಯಾತ್ರೆ ಮಾಡಿದ್ದರಿಂದಲೇ ರಾಜ್ಯ ಸರ್ಕಾರ ಬಜೆಟ್ನಲ್ಲಿ ಅನುದಾನ ಮೀಸಲಿರಿಸಿದೆ. ನಮ್ಮ ಮುಂದಿನ ಹೋರಾಟ ಮಹದಾಯಿ ಯೋಜನೆ ಅನುಷ್ಠಾನ ಹಾಗೂ ಕಲ್ಯಾಣ ಕರ್ನಾಟಕ ಅಭಿವೃದ್ಧಿ’ ಎಂದು ವಿಧಾನಪರಿಷತ್ ಸದಸ್ಯ ಸಲೀಂ ಅಹ್ಮದ್ ಹೇಳಿದರು.

ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬಿಜೆಪಿಗೆ ರಾಜ್ಯದ ಜನರ ಸಮಸ್ಯೆ ಪರಿಹರಿಸುವ ಇಚ್ಛಾಶಕ್ತಿ ಇಲ್ಲ. ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಪರಿಸರ ಇಲಾಖೆಯಿಂದ ಅನುಮತಿ ತೆಗೆದುಕೊಳ್ಳುವ ಯೋಗ್ಯತೆ ಇಲ್ಲ. ಹೋರಾಟ ಮಾಡಿದ ನಮ್ಮ ಮೇಲೆ ಪ್ರಕರಣ ದಾಖಲಿಸಿದ್ದಾರೆ. ಈ ಬೆದರಿಕೆಗಳಿಗೆ ಕಾಂಗ್ರೆಸ್ ಜಗ್ಗುವುದಿಲ್ಲ. ಉಳಿದ ರಾಜ್ಯದ ಪರಿಸ್ಥಿತಿಯೇ ಬೇರೆ ಕರ್ನಾಟಕದ ರಾಜಕೀಯ ಪರಿಸ್ಥಿತಿಯೇ ಬೇರೆ ಇದೆ. ಜನ ಇಲ್ಲಿ ಬದಲಾವಣೆ ಬಯಸುತ್ತಿದ್ದಾರೆ. ಹೀಗಾಗಿ, ರಾಜ್ಯದಲ್ಲಿ ನಡೆದ ಉಪ ಚುನಾವಣೆ ಹಾಗೂ ಸ್ಥಳೀಯ ಮಟ್ಟದ ಚುನಾವಣೆಯಲ್ಲಿ ನಾವು ಗೆಲುವು ಸಾಧಿಸಿದ್ದೇವೆ’ ಎಂದು ಹೇಳಿದರು.

ಕರ್ನಾಟಕ, ಗೋವಾ ಕಾಂಗ್ರೆಸ್ ಬೇರೆ: ಗೋವಾ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಮಹದಾಯಿ ಯೋಜನೆ ಅಂಶದ ಬಗ್ಗೆ ಪ್ರತಿಕ್ರಿಯಿಸಿದ ಸಲೀಂ ಅಹ್ಮದ್ ಅವರು, ‘ಮಹದಾಯಿ ಯೋಜನೆ ಅನುಷ್ಠಾನಕ್ಕೆ ಕಾಂಗ್ರೆಸ್ ಬದ್ಧವಾಗಿದೆ. ಕರ್ನಾಟಕ ಕಾಂಗ್ರೆಸ್ನ ಪ್ರಣಾಳಿಕೆಯಲ್ಲಿ ಈ ಅಂಶ ಬಂದರೆ ಕೇಳಿ ಗೋವಾದ ಕಾಂಗ್ರೆಸ್ ಬೇರೆ, ಕರ್ನಾಟಕದ ಕಾಂಗ್ರೆಸ್ ಬೇರೆ. ಅಧಿಕಾರದಲ್ಲಿ ಇರುವವರು ಯೋಜನೆ ಜಾರಿ ಮಾಡಬೇಕು. ಅದನ್ನು ಬಿಟ್ಟು ಕಾಂಗ್ರೆಸ್ ಅವರೊಂದಿಗೆ ಮಾತನಾಡಿ ಎನ್ನುವುದಲ್ಲ. ಗೋವಾದಲ್ಲಿ ಸರ್ಕಾರ ರಚಿಸಲಿರುವ ಬಿಜೆಪಿ ಈಗ ಮಹದಾಯಿ ಜಾರಿಗೊಳಿಸಲು ನೋಡೊಣ’ ಎಂದು ಸವಾಲು ಹಾಕಿದರು.

ಶಾಸಕ ಪ್ರಸಾದ ಅಬ್ಬಯ್ಯ, ಇ.ಎಂ.ಸುದರ್ಶನ್ ನಾಚಿಪ್ಪನ್, ಡಿಜಿಟಲ್ ಸದಸ್ಯತ್ವ ನೋಂದಣಿ ಅಭಿಯಾನದ ಅಧ್ಯಕ್ಷ ಆರ್.ವಿ. ವೆಂಕಟೇಶ್, ಮುಖ್ಯ ಸಂಯೋಜಕ ರಘುನಂದನ್ ರಾಮಣ್ಣ, ಕಾಂಗ್ರೆಸ್ ಗ್ರಾಮೀಣ ಘಟಕದ ಅಧ್ಯಕ್ಷ ಅನಿಲಕುಮಾರ ಪಾಟೀಲ, ಜಿಲ್ಲಾ ಘಟಕದ ಅಧ್ಯಕ್ಷ ಅಲ್ತಾಫ್ ಹಳ್ಳೂರ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.