ಗುರುವಾರ , ಆಗಸ್ಟ್ 18, 2022
25 °C

ಕಾಂಗ್ರೆಸ್‍ ಬೃಹತ್ ಪ್ರತಿಭಟನೆ ನಾಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವಲಗುಂದ: ಕೇಂದ್ರದ ಆಡಳಿತದಲ್ಲಿರುವ ಬಿಜೆಪಿ ಸರ್ಕಾರ ಇ.ಡಿ ತನಿಖೆಯ ನೆಪದಲ್ಲಿ ಗಾಂಧಿ ಕುಟುಂಬದ ರಾಜಕೀಯ ವರ್ಚಸ್ಸನ್ನು ತಗ್ಗಿಸುವ ಉದ್ದೇಶದಿಂದ ಕಿರುಕುಳ ನೀಡುತ್ತಿರುವುದನ್ನು ಖಂಡಿಸಿ ಜೂನ್‌ 20ರಂದು ಬೆಳಿಗ್ಗೆ 11 ಕ್ಕೆ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ನವಲಗುಂದ ಬ್ಲಾಕ ಕಾಂಗ್ರೆಸ್ ಅಧ್ಯಕ್ಷ ವರ್ಧಮಾನಗೌಡ ಹಿರೇಗೌಡ್ರ ತಿಳಿಸಿದರು.

ನವಲಗುಂದ ಪಟ್ಟಣದ ಕಾಂಗ್ರೆಸ್ ಭವನದಲ್ಲಿ ಹಮ್ಮಿಕೊಂಡಿದ್ದ ಸಭೆಯಲ್ಲಿ ಮಾತನಾಡಿ, ಮೆರವಣಿಗೆ ಪಟ್ಟಣದ ಲಿಂಗರಾಜ ವೃತ್ತದಿಂದ ತಹಶೀಲ್ದಾರ್ ಕಾರ್ಯಾಲಯದವರೆಗೆ ನಡೆಯಲಿದೆ ಎಂದು ಹೇಳಿದರು.

ಪ್ರತಿಭಟನೆಯಲ್ಲಿ ಮಾಜಿ ಸಚಿವ ಕೆ.ಎನ್.ಗಡ್ಡಿ, ಮಾಜಿ ಶಾಸಕ ಎನ್.ಎಚ್.ಕೋನರಡ್ಡಿ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ವಿನೋದ ಅಸೂಟಿ, ಕೆಪಿಸಿಸಿ ಸದಸ್ಯ ವಿಜಯ ಕುಲಕರ್ಣಿ, ಕೆಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಬಾಪುಗೌಡ ಪಾಟೀಲ, ಜಿ.ಪಂ ಮಾಜಿ ಉಪಾಧ್ಯಕ್ಷ ಶಿವಾನಂದ ಕರಿಗಾರ, ಚಂಬಣ್ಣ ಹಾಳದೋಟರ, ವಿಜಯಗೌಡ ಪಾಟೀಲ ಪಾಲ್ಗೊಳ್ಳುವರು ಎಂದು ತಿಳಿಸಿದ್ದಾರೆ.

ಪುರಸಭೆ ಅಧ್ಯಕ್ಷ ಅಪ್ಪಣ್ಣ ಹಳ್ಳದ, ಪುರಸಭೆ ಮಾಜಿ ಅಧ್ಯಕ್ಷ ಮಂಜು ಜಾಧವ, ಕಾಂಗ್ರೆಸ್ ಮುಖಂಡ ಆರ್.ಎಚ್. ಕೋನರಡ್ಡಿ ಉಪಸ್ಥಿತರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.