ಹುಬ್ಬಳ್ಳಿ: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಉತ್ತಮ ಆಡಳಿತ ನೀಡುವಲ್ಲಿ ವಿಫಲವಾಗಿವೆ ಎಂದು ಆರೋಪಿಸಿ ಕಾಂಗ್ರೆಸ್ ಮುಖಂಡರು ಮಿನಿವಿಧಾನಸೌಧ ಎದುರು ಗುರುವಾರ ಪ್ರತಿಭಟನೆ ಮಾಡಿದರು.

ಭೂಸುಧಾರಣಾ ಕಾಯ್ದೆ ತಿದ್ದುಪಡಿ, ಎಪಿಎಂಸಿ ಕಾಯ್ದೆ ತಿದ್ದುಪಡಿ, ಕೈಗಾರಿಕಾ ವಿರೋಧಿ ಕಾಯ್ದೆಗಳನ್ನು ತಕ್ಷಣವೇ ವಾಪಸ್ ಪಡೆಯಬೇಕು ಎಂದು ಆಗ್ರಹಿಸಲಾಯಿತು.

ರಾಜ್ಯದಲ್ಲಿ ಅತಿವೃಷ್ಟಿಯಿಂದ ಆಗಿರುವ ತೀವ್ರ ಹಾನಿಗೆ ಸೂಕ್ತ ಪರಿಹಾರ ನೀಡಬೇಕು. ಪರಿಹಾರ ಕೇಂದ್ರಗಳನ್ನು ತೆರದು ಸಂಕಷ್ಟದಲ್ಲಿರುವವರಿಗೆ ಸ್ಪಂದಿಸಬೇಕು ಎಂದು ಒತ್ತಾಯಿಸಿದರು.

ಕೊರೊನಾ ನಿಯಂತ್ರಣ ಕಾರ್ಯಕ್ರಮದಲ್ಲಿ ನಡೆದಿರುವ ವ್ಯಾಪಕ ಭ್ರಷ್ಟಾಚಾರದ ನ್ಯಾಯಾಂಗ ತನಿಖೆಯನ್ನು ಹೈಕೋರ್ಟ್ ನ್ಯಾಯಾಧೀಶರಿಂದ ಮಾಡಿಸಬೇಕು ಎಂದು ಆಗ್ರಹಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.